ಪಾಲಕ್ಕಾಡ್: ಪಾಲಕ್ಕಾಡ್ ಕುಮಾರನಲ್ಲೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ. ಒಂಬತ್ತನೇ ತರಗತಿಯ ವಿದ್ಯಾರ್ಥಿಗಳು ಎಂಟನೇ ತರಗತಿಯ ವರಾಂಡಾ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಮಕ್ಕಳ ಮಧ್ಯೆ ಮಾರಾಮಾರಿ ನಡೆದಿದೆ.
ಕುಮಾರನಲ್ಲೂರು ಸೆಂಟರ್‍ನಲ್ಲಿರುವ ವಾಣಿಜ್ಯ ಸಂಸ್ಥೆಗಳಿಗೆ ನುಗ್ಗಿ ಸಾಮಾನುಗಳನ್ನು ತೆಗೆದುಕೊಂಡು ಹೋದ ವಿದ್ಯಾರ್ಥಿಗಳು ಪರಸ್ಪರ ಹಲ್ಲೆ ನಡೆಸಿದ್ದಾರೆ. ನಿನ್ನೆ ಸಂಜೆ ಘರ್ಷಣೆ ನಡೆದಿದೆ. ವಿದ್ಯಾರ್ಥಿಗಳ ಗಲಭೆಯಿಂದಾಗಿ ವ್ಯಾಪಾರ-ವ್ಯವಹಾರಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಳ್ಳುವುದಾಗಿ ವರ್ತಕರು ತಿಳಿಸಿದ್ದಾರೆ.