HEALTH TIPS

ಹಲ್ಲಿನ ರೂಟ್ ಕೆನಾಲ್ ಬಳಿಕ ಪ್ರಾಣ ಬಿಟ್ಟ ಬಾಲಕ; ವೈದ್ಯಕೀಯ ನಿರ್ಲಕ್ಷ್ಯವೆಂದ ಕುಟುಂಬಸ್ಥರು

                ಕುನ್ನಂಕುಲಂ :ಖಾಸಗಿ ಆಸ್ಪತ್ರೆಯಲ್ಲಿ ಹಲ್ಲಿನ ರೂಟ್ ಕೆನಾಲ್ ಚಿಕಿತ್ಸೆಗೆ ಒಳಗಾಗಿದ್ದ ಪುಟ್ಟ ಮಗು ಮಂಗಳವಾರ ದಾರುಣವಾಗಿ ಸಾವನ್ನಪ್ಪಿದ್ದು, ಕುನ್ನಂಕುಲಂನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

                 4 ವರ್ಷದ ಬಾಲಕ ಮೃತನಾಗಿದ್ದಾನೆ. ಬಾಲಕನನ್ನು ಕಳೆದುಕೊಂಡ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ.

                     ವೈದ್ಯಕೀಯ ನಿರ್ಲಕ್ಷ್ಯ ಆರೋಪದ ಮೇಲೆ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ.


                           ನಡೆದಿದ್ದೇನು?: ರೂಟ್ ಕೆನಾಲ್​ಗೆಂದು ಕುಟುಂಬಸ್ಥರು ಬಾಲಕನನ್ನು ಕುನ್ನಂಕುಲಂನಲ್ಲಿ ಖಾಸಗಿ ಆಸ್ಪತ್ರೆಗೆ ಕಡೆದುಕೊಂಡು ಬಂದಿದ್ದಾರೆ. ವೈದ್ಯರು ಮೊದಲು ಬಾಲಕನಿಗೆ ಅರಿವಳಿಕೆ ನೀಡಿ ರೂಟ್ ಕೆನಾಲ್ ಮಾಡಿದ್ದಾರೆ.

                     ಆದರೆ, ರೂಟ್ ಕೆನಾಲ್​ ನಂತರ ಮಗುವಿಗೆ ಪ್ರಜ್ಞೆ ಬಂದಾಗ ತೀವ್ರ ಅಸ್ವಸ್ಥತೆಯನ್ನು ಅನುಭವಿಸಿದೆ, ರಕ್ತದೊತ್ತಡ ಕಡಿಮೆಯಾಗಿತ್ತು. ಬಳಿಕ 4 ವರ್ಷದ ಪುಟ್ಟ ಮಗುವಿನ ಪ್ರಾಣಪಕ್ಷಿ ಹಾರಿಹೋಗಿದೆ. ರೂಟ್ ಕೆನಾಲ್​ಗೆಂದು ಆಸ್ಪತ್ರೆಗೆ ಬಂದಿದ್ದ ಮಗ ಇನ್ನಿಲ್ಲ ಎನ್ನುವ ಸುದ್ದಿ ಕುಟುಂಬಸ್ಥರಿಗೆ ಆಘಾತವನ್ನುಂಟು ಮಾಡಿದೆ. ಪೋಷಕರ ದೂರಿನ ಮೇರೆಗೆ ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries