ಮಂಜೇಶ್ವರ: ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ಜೀರ್ಣೋದ್ದಾರ ಸಮಿತಿಯ ನೇತೃತ್ವದಲ್ಲಿ ಪುನ:ನಿರ್ಮಾಣಗೊಳ್ಳಲಿರುವ ಕ್ಷೇತ್ರದ ನಿಧಿ ಸಂಗ್ರಹಕ್ಕಾಗಿ ಬೃಹತ್ ನಿಧಿ ಸಮರ್ಪಣಾ ಕಾರ್ಯಕ್ರಮ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭs ಭಾನುವಾರ ಕ್ಷೇತ್ರದಲ್ಲಿ ನೆರವೇರಿತು.
ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದ ಶ್ರೀ ಗುರು ದೇವಾನಂದ ಸ್ವಾಮೀಜಿ, ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಹಾಗೂ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ದಿವ್ಯ ಉಪಸ್ಥಿತಿಯೊಂದಿಗೆ ಸಭಾಕರ್ಯಕ್ರಮವನ್ನು ದೀಪ ಬೆಳಗಿಸಿ, ಉದ್ಘಾಟಿಸಿದರು.
ಮಲ್ಪೆಯ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕ್ಷೇತ್ರದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪದ್ಮನಾಭ ಕಡಪ್ಪರ ಅಧ್ಯಕ್ಷತೆ ವಹಿಸಿದ್ದರು.
ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೃಷ್ಣ ಎನ್. ಉಚ್ಚಿಲ್ ಅವರು ನಿಧಿ ಸಂಚಯನ ಕಾರ್ಯಕ್ರಮಕ್ಕೆ ಮೊದಲ ಹಂತದ ದೇಣಿಗೆಯಾಗಿ 25 ಲಕ್ಷ ರೂ. ಮೊತ್ತದ ಚೆಕ್ ನ್ನು ಮಾತೃಶ್ರಿ ಅಮ್ಮಣ್ಣಿ ಅಮ್ಮನವರ ಹಸ್ತದಿಂದ ಜೀರ್ಣೋದ್ಧಾರ ಸಮಿತಿಗೆ ನೀಡಿದರು. ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಗಣೇಶ್ ಬಜಾಲ್ ಕ್ಷೇತ್ರದ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದರು. ಬ್ರಹ್ಮ ಶ್ರೀ ಬಡಾಜೆ ಬೂಡು ಗೋಪಾಲಕೃಷ್ಣ ತಂತ್ರಿ, ಆಧ್ಯಾತ್ಮಿಕ ಚಿಂತಕ ವಿಜಯ ಗುರೂಜಿ, ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ, ಕನಿಲ ಶ್ರೀ ಭಗವತಿ ಕ್ಷೇತ್ರದ ಅಧ್ಯಕ್ಷ ವಿಶ್ವನಾಥ ಕುದುರು, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಜನಾರ್ದನ್ ಮೊದಲಾದವರು ಉಪಸ್ಥಿತರಿದ್ದರು. ಕನಿಲ ಶ್ರೀ ಭಗವತಿ ಕ್ಷೇತ್ರದ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಂದ ಪ್ರಾರ್ಥನೆ ನಡೆಯಿತು. ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ಕಾರ್ಯದರ್ಶಿ ನ್ಯಾಯವಾದಿ ನವೀನ್ ರಾಜ್ ಕೆ.ಜೆ ಸ್ವಾಗತಿಸಿದರು. ಧಾರ್ಮಿಕ ಮುಂದಾಳು ದಿನಕರ್ ಬಿ.ಎಂ ಹೊಸಂಗಡಿ, ಹರೀಶ್ ಶೆಟ್ಟಿ ಮಾಡ ಕಾರ್ಯಕ್ರಮ ನಿರೂಪಿಸಿದರು. ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಲಕ್ಷ್ಮಣ್.ಟಿ ವಂದಿಸಿದರು.