ನ್ಯೂಯಾರ್ಕ್: ನ್ಯೂಜೆರ್ಸಿಯಲ್ಲಿನ ಮನೆಯಲ್ಲಿ ಅಜ್ಜ-ಅಜ್ಜಿ ಮತ್ತು ಚಿಕ್ಕಪ್ಪನನ್ನು ಕೊಲೆ ಮಾಡಿದ ಆರೋಪದ ಮೇಲೆ 23 ವರ್ಷದ ಭಾರತೀಯ ವಿದ್ಯಾರ್ಥಿ ಓಂ ಬ್ರಹಂಭಟ್ಟನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯೂಯಾರ್ಕ್: ನ್ಯೂಜೆರ್ಸಿಯಲ್ಲಿನ ಮನೆಯಲ್ಲಿ ಅಜ್ಜ-ಅಜ್ಜಿ ಮತ್ತು ಚಿಕ್ಕಪ್ಪನನ್ನು ಕೊಲೆ ಮಾಡಿದ ಆರೋಪದ ಮೇಲೆ 23 ವರ್ಷದ ಭಾರತೀಯ ವಿದ್ಯಾರ್ಥಿ ಓಂ ಬ್ರಹಂಭಟ್ಟನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿಲೀಪ್ಕುಮಾರ್ ಬ್ರಹಂಭಟ್ಟ (72), ಬಿಂದು ಬ್ರಹಂಭಟ್ಟ (72) ಮತ್ತು ಯಶ್ಕುಮಾರ್ ಬ್ರಹಂಭಟ್ಟ (38) ಅವರನ್ನು ಗುಂಡಿಕ್ಕಿ ಕೊಂದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ದಕ್ಷಿಣ ಪ್ಲೈನ್ಫೀಲ್ಡ್ ಪೊಲೀಸ್ ಇಲಾಖೆಯು ಹೇಳಿಕೆಯಲ್ಲಿ ತಿಳಿಸಿದೆ.
ಸೋಮವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಅಪಾರ್ಟ್ಮೆಂಟ್ನಲ್ಲಿ ಗುಂಡೇಟಿನ ಶಬ್ದ ಕೇಳಿಬಂದಿತ್ತು. ಈ ಬಗ್ಗೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮಹಿಳೆ ಸೇರಿ ಮೂವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನಂತರ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಗುಜರಾತ್ ಮೂಲದ ಓಂ, ಕೆಲ ತಿಂಗಳ ಹಿಂದಷ್ಟೇ ನ್ಯೂಜೆರ್ಸಿಗೆ ತೆರಳಿ ಅಜ್ಜ-ಅಜ್ಜಿಯೊಂದಿಗೆ ವಾಸವಿದ್ದ ಎಂದು ವರದಿಯಾಗಿದೆ.