ಉತ್ತರಕಾಶಿ : ಉತ್ತರಕಾಶಿಯ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸಲು ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳ ನಡುವೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನಾ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಸ್ತುತ ಸಿಲ್ಕ್ಯಾರಾದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ ಕುರಿತು ಎಎನ್‌ಐ ಜತೆ ಮಾತನಾಡಿದ ಸಿಎಂ ಧಾಮಿ, 'ನಾವು ಲಭ್ಯವಿರುವ ಎಲ್ಲಾ ಸಾಧ್ಯತೆಗಳ ಬಗ್ಗೆ ಕೆಲಸ ಮಾಡುತ್ತಿದ್ದೇವೆ. ಎಲ್ಲಾ ರೀತಿಯ ತಜ್ಞರ ತಂಡ ಇಲ್ಲಿ ಕಾರ್ಯನಿರ್ವಹಿಸುತ್ತಿವೆ' ಎಂದು ಹೇಳಿದ್ದಾರೆ.
'ಎಲ್ಲರ ಜೀವ ಉಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ರಾಜ್ಯ ಸರ್ಕಾರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸಂಸ್ಥೆಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡಲು ಸಿದ್ಧವಿದೆ. ಕಾರ್ಯಾಚರಣೆಗೆ ಆಡಚಣೆ ಹೆಚ್ಚುತ್ತಿದೆ. ಅಪಾಯದಲ್ಲಿ ಸಿಲುಕಿರುವವರು ಬೇಗ ಪಾರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದು ಸಿಎಂ ಧಾಮಿ ಹೇಳಿದರು.
ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಾಣ ಹಂತದಲ್ಲಿದ್ದ ಸುರಂಗ ನ.12ರ ಮುಂಜಾನೆ ಕುಸಿದಿತ್ತು.