ಜಮ್ಮು: ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಕ್ರಿಕೆಟ್ ತಂಡದ ಸೋಲನ್ನು ಸಂಭ್ರಮಿಸಿದ ಆರೋಪದಲ್ಲಿಕೃಷಿ ವಿಶ್ವವಿದ್ಯಾಲಯದ ಏಳು ವಿದ್ಯಾರ್ಥಿಗಳನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಬಂಧಿತ ಯುವಕರು ಕಾಶ್ಮೀರದ ಶೇರ್-ಎ-ಕಾಶ್ಮೀರ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಸೋತು ಆಸ್ಟ್ರೇಲಿಯಾ ಕಪ್ ಗೆದ್ದ ನಂತರ ಕಾಲೇಜು ಸಹಪಾಠಿಗಳು ನನಗೆ ಕಿರುಕುಳ ನೀಡಿದ್ದಾರೆ ಮತ್ತು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಿ ಹೊರಗಿನ ವಿದ್ಯಾರ್ಥಿಯೊಬ್ಬ ದಾಖಲಿಸಿದ ದೂರಿನ ಆಧಾರದಲ್ಲಿ ತನಿಖೆ ಆರಂಭಿಸಿದ ಪೊಲೀಸರು, ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.