ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ವೈಎಸ್‌ಆರ್ ತೆಲಂಗಾಣ ಪಕ್ಷ (ವೈಎಸ್‌ಆರ್‌ಟಿಪಿ) ಸ್ಫರ್ಧೆಯಿಂದ ಹಿಂದೆ ಸರಿದಿದೆ.
ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ವೈಎಸ್‌ಆರ್ ತೆಲಂಗಾಣ ಪಕ್ಷ (ವೈಎಸ್‌ಆರ್‌ಟಿಪಿ) ಸ್ಫರ್ಧೆಯಿಂದ ಹಿಂದೆ ಸರಿದಿದೆ.
ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈ.ಎಸ್.ಶರ್ಮಿಳಾ ಅವರು ಮಾತನಾಡಿ, ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ವೈಎಸ್‌ಆರ್‌ಟಿಪಿ ಸ್ಪರ್ಧಿಸುವುದಿಲ್ಲ.
ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ಅವರು ಕೆಲವು ವರ್ಷಗಳ ಹಿಂದಷ್ಟೇ ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪಿಸಿದ್ದರು. ಜತೆಗೆ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತುಕತೆ ನಡೆಸಿದ್ದರು.
ತೆಲಂಗಾಣದಲ್ಲಿ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್), ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪೈಪೋಟಿ ಏರ್ಪಟ್ಟಿದೆ.
119 ಸ್ಥಾನಗಳ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಡಿ.3ರಂದು ಮತ ಎಣಿಕೆ ನಡೆಯಲಿದೆ.