ಕುಂಬಳೆ: ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ದೇವರಕೆರೆಯ ಬಬಿಯಾ ಸಾವಿನ ಒಂದು ವರ್ಷದ ನಂತರ ಮೊಸಳೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಕರ ಸಂಭ್ರಮ ಕಾರ್ಯಕ್ರಮ ನ. 17ರಂದು ದೇವಸ್ಥಾನದಲ್ಲಿ ಜರುಗಲಿದೆ.
ನಾಳೆ ಬೆಳಗ್ಗೆ 10ಕ್ಕೆ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಲಿದೆ. ಮಧ್ಯಾಹ್ನ 2.30ಕ್ಕೆ ದೆವಸ್ಥಾನ ಸಭಾಂಗಣದಲ್ಲಿ ಭಕ್ತಾದಿಗಳ ಸಭೆಯನ್ನೂ ಆಯೋಜಿಸಿರುವುದಾಗಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರಾಮನಾಥ ಶೆಟ್ಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.