HEALTH TIPS

ಸಿಲ್ಕ್ಯಾರಾ ಸುರಂಗದಲ್ಲಿ ಸಾವು ಗೆದ್ದು ಬಂದ ಕಾರ್ಮಿಕರ ಜೊತೆ ಪ್ರಧಾನಿ ಮೋದಿ ಮಾತು

              ವದೆಹಲಿ: ಸಿಲ್ಕ್ಯಾರಾ ಸುರಂಗದಲ್ಲಿ 17 ದಿನ ಸಿಲುಕಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ರಕ್ಷಣಾ ಪಡೆಗಳ ಕಾರ್ಯಾಚರಣೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

                 ಏತನ್ಮಧ್ಯೆ ಯಶಸ್ವಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಸಂತಸ ವ್ಯಕ್ತಪಡಿಸಿ ಮಂಗಳವಾರ ರಾತ್ರಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ 41 ಕಾರ್ಮಿಕರ ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದರು.


                ದೂರವಾಣಿ ಕರೆ ಮಾಡಿದ್ದಾಗ ಉತ್ತರಕಾಶಿ ಜಿಲ್ಲಾಡಳಿತ ಕಾರ್ಮಿಕರಿಗೆ ಅಗತ್ಯ ಸೌಕರ್ಯ ಮಾಡಿತ್ತು.

                  ಈ ಯಶಸ್ವಿ ಕಾರ್ಯಾಚರಣೆ ನಮ್ಮನ್ನೆಲ್ಲ ಭಾವುಕಗೊಳಿಸಿದೆ. 17 ದಿನ ಸುರಂಗದಲ್ಲಿ ಇದ್ದು ಬದುಕಿ ಬಂದ ನೀವೆಲ್ಲ (ಕಾರ್ಮಿಕರು) ಪ್ರತಿಯೊಬ್ಬರಿಗೂ ಪ್ರೇರಣದಾಯಕವಾಗುತ್ತೀರಿ. ಮುಂದಿನ ದಿನಗಳಲ್ಲಿ ನಿಮಗೆಲ್ಲ ಉತ್ತಮ ಆರೋಗ್ಯ ಸಿಗಲಿ ಎಂದು ಹಾರೈಸುತ್ತೇನೆ ಎಂದು ಮೋದಿ ಅವರು ದೂರವಾಣಿ ಸಂಭಾಷಣೆಯಲ್ಲಿ ಹೇಳಿದ್ದಾರೆ.


               ನರೇಂದ್ರ ಮೋದಿ ಅವರು ರಕ್ಷಣಾ ಪಡೆಗಳ ಈ ಸಾಹಸವನ್ನು ಕೊಂಡಾಡಿದ್ದು, ಈ ಕಾರ್ಯದಲ್ಲಿ ತೊಡಗಿದ್ದ ಎಲ್ಲರೂ ಮಾನವೀಯತೆ ಹಾಗೂ ಒಂದು ತಂಡವಾಗಿ ಕೆಲಸ ಮಾಡುವುದಕ್ಕೆ ಅದ್ಭುತವಾದ ಉದಾಹರಣೆಯೊಂದನ್ನು ಸೃಷ್ಟಿಸಿಕೊಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

                     ದೀರ್ಘಾವಧಿಯ ಕಾಯುವಿಕೆ ನಂತರ ಕಾರ್ಮಿಕರೆಲ್ಲ ಈಗ ತಮ್ಮ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ತುಂಬಾ ಸಂತಸದ ವಿಷಯ. ಈ ಸವಾಲಿನ ಸಮಯದಲ್ಲಿ ಅವರ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯವನ್ನು ಎಲ್ಲರೂ ಮೆಚ್ಚಲೇಬೇಕು ಎಂದು ಮೋದಿ ಹೇಳಿದ್ದಾರೆ.

ಸಾವು ಗೆದ್ದು ಬಂದ ಕಾರ್ಮಿಕರು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries