ನವದೆಹಲಿ: ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ನಕಲಿ ವೈದ್ಯ ಸೇರಿದಂತೆ ನಾಲ್ವರನ್ನು ದೆಹಲಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ನವದೆಹಲಿ: ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ನಕಲಿ ವೈದ್ಯ ಸೇರಿದಂತೆ ನಾಲ್ವರನ್ನು ದೆಹಲಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಬಂಧಿತರು ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್‌ನಲ್ಲಿನ ಕ್ಲಿನಿಕ್‌ವೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಬಂಧಿತರ ಪೈಕಿ ಮಹೇಂದ್ರ ಎಂಬಾತ ಟೆಕ್ನಿಷಿಯನ್ ಆಗಿದ್ದು, ಫೋರ್ಜರಿ ಮೂಲಕ ಎಂಬಿಬಿಎಸ್ ಪ್ರಮಾಣಪತ್ರ ಪಡೆದುಕೊಂಡಿದ್ದ ಎಂಬ ಆರೋಪ ಇದೆ. ಪ್ರಮಾಣಪತ್ರಗಳ ಪರಿಶೀಲನೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಗೆ ಆರೋಪಿಗಳು ಶಸ್ತ್ರಚಿಕಿತ್ಸೆ ನೆರವೇರಿಸಿದ್ದರು' ಎಂದು ಮೃತ ವ್ಯಕ್ತಿಯ ಸಂಬಂಧಿಕರು ಆರೋಪಿಸಿದ್ದರು.
ಈ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ನೀಡದಿರುವ ಬಗ್ಗೆ 10ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.