ನವದೆಹಲಿ: ಜಾಗತಿಕ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು 2 ದಿನ (ನ.30ರಿಂದ ಡಿ.1) ದುಬೈಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ತಿಳಿಸಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಮತ್ತು ಅಬುಧಾಬಿಯ ದೊರೆ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಆಹ್ವಾನದ ಮೇರೆಗೆ ಮೋದಿ ಶೃಂಗಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಎಂಇಎ ಹೇಳಿದೆ.