ನವದೆಹಲಿ: ಕೇಂದ್ರ ಪರಿಸರ ಸಚಿವಾಲಯದ ಅಧೀನದಲ್ಲಿ ಬರುವ ತಜ್ಞರ ಮೌಲ್ಯಮಾಪನ ಸಮಿತಿಗೆ ಗೌತಮ್ ಅದಾನಿ ಕಂಪನಿಯ ಉದ್ಯೋಗಿ ಜನಾರ್ಧನ ಚೌಧರಿ ಅವರನ್ನು ನೇಮಕ ಮಾಡಿದ್ದನ್ನು ವಿರೋಧ ಪಕ್ಷಗಳು ಟೀಕೆ ಮಾಡಿವೆ.
'ಅದಾನಿಯ ಪ್ರಧಾನ ಸೇವಕ, ಅದಾನಿ ಉದ್ಯೋಗಿ ಜನಾರ್ದನ ಚೌಧರಿ ಅವರನ್ನು ಪರಿಸರ ಸಚಿವಾಲಯದ ತಜ್ಞರ ಮೌಲ್ಯಮಾಪನ ಸಮಿತಿಗೆ ನೇಮಕ ಮಾಡಿದ್ದಾರೆ.
ಅಲ್ಲದೆ ಇತ್ತೀಚೆಗೆ ಮಹಾರಾಷ್ಟ್ರದ ಸತಾರದಲ್ಲಿ 1500 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಸ್ಥಾವರಕ್ಕೆ ಇವರೇ ಒಪ್ಪಿಗೆ ನೀಡಿದ್ದಾರೆ ಎಂದು ಆರೋಪಿಸಿದೆ. ಇದು ವ್ಯಾಪಾರವನ್ನು ಸುಲಭಗೊಳಿಸುವ ವಿಧಾನ ಎಂದು ವ್ಯಂಗ್ಯವಾಡಿದೆ.
ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್‌ನ ಸಲಹೆಗಾರರಾಗಿರುವ ಚೌಧರಿಯವನ್ನು ಅದಾನಿ ಸಮೂಹದ ಜಲವಿದ್ಯುತ್ ಯೋಜನೆ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಿರುವ ಪರಿಸರ ಸಚಿವಾಲಯದ ಮೌಲ್ಯಮಾಪನ ಸಮಿತಿಗೆ ಸೆಪ್ಟೆಂಬರ್‌ನಲ್ಲಿ 27ರಂದು ನೇಮಕ ಮಾಡಲಾಗಿದೆ.
ಸರ್ಕಾರ ಒಪ್ಪಿಗೆ ನೀಡುವುಕ್ಕೂ ಮುನ್ನ ಈ ಸಮಿತಿಯು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಿದೆ.
ಶಿವಸೇನಾ (ಯಟಿಬಿ) ಹಾಗೂ ತೃಣಮೂಲ ಕಾಂಗ್ರೆಸ್ ಕೂಡ ಸರ್ಕಾರದ ಈ ನಡೆಯನ್ನು ಟೀಕಿಸಿದೆ. ದೋಸ್ತಿ ಎಂದರೆ ಹೀಗಿರಬೇಕು ಎಂದು ಶಿವಸೇನಾದ ರಾಜ್ಯಸಭೆ ಸದಸ್ಯೆ ಪ್ರಿಯಾಂಕ ಚತುರ್ವೇದಿ ಹೇಳಿದ್ದಾರೆ.