ನವದೆಹಲಿ/ಜಮ್ಮು: ಮಾನವ ಕಳ್ಳಸಾಗಣೆ ದಂಧೆಯಲ್ಲಿ ತೊಡಗಿರುವವರ ಬೇಟೆಗೆ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆಯು(ಎನ್‌ಐಎ) ದೇಶದಾದ್ಯಂತ ದಾಳಿ ನಡೆಸಿದ್ದು, ಜಮ್ಮುವಿನಲ್ಲಿ ಒಬ್ಬ ಮ್ಯಾನ್ಮಾರ್ ಪ್ರಜೆಯನ್ನು ವಶಕ್ಕೆ ಪಡೆದಿದೆ.
ನವದೆಹಲಿ/ಜಮ್ಮು: ಮಾನವ ಕಳ್ಳಸಾಗಣೆ ದಂಧೆಯಲ್ಲಿ ತೊಡಗಿರುವವರ ಬೇಟೆಗೆ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆಯು(ಎನ್‌ಐಎ) ದೇಶದಾದ್ಯಂತ ದಾಳಿ ನಡೆಸಿದ್ದು, ಜಮ್ಮುವಿನಲ್ಲಿ ಒಬ್ಬ ಮ್ಯಾನ್ಮಾರ್ ಪ್ರಜೆಯನ್ನು ವಶಕ್ಕೆ ಪಡೆದಿದೆ.
ಮಾನವ ಕಳ್ಳಸಾಗಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ 8 ರಾಜ್ಯ, 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಎನ್‌ಐಎ ವಕ್ತಾರರು ತಿಳಿಸಿದ್ದಾರೆ.
ಕರ್ನಾಟಕ, ತಮಿಳುನಾಡು, ತ್ರಿಪುರಾ, ಪಶ್ಚಿಮ ಬಂಗಾಳ, ತೆಲಂಗಾಣ, ಅಸ್ಸಾಂ, ಹರಿಯಾಣ, ರಾಜಸ್ಥಾನ ರಾಜ್ಯಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ದಾಳಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ರೋಹಿಂಗ್ಯಾ ಮುಸ್ಲಿಂ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬಂಧಿತನನ್ನು ಜಾಫರ್ ಆಲಂ ಎಂದು ಗುರುತಿಸಲಾಗಿದ್ದು, ಜಮ್ಮುವಿನ ಬತಿಂಡಿ ಪ್ರದೇಶದ ತಾತ್ಕಾಲಿಕ ನಿವಾಸದಿಂದ 2 ಗಂಟೆ ಸುಮಾರಿಗೆ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪಾಸ್‌ಪೋರ್ಟ್ ಕಾಯ್ದೆಯ ಉಲ್ಲಂಘನೆ ಮತ್ತು ಮಾನವ ಕಳ್ಳಸಾಗಣೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾಗಿದೆ ಎಂದು ಜಮ್ಮುವಿನ ಅಧಿಕಾರಿ ತಿಳಿಸಿದ್ದಾರೆ. ಮ್ಯಾನ್ಮಾರ್ ವಲಸಿಗರು ವಾಸಿಸುವ ಕೊಳೆಗೇರಿಗಳಲ್ಲಿ ದಾಳಿ ನಡೆದಿದೆ.