ಪುಣೆ: ಭಯೋತ್ಪಾದನೆ ನಿಗ್ರಹಕ್ಕೆ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಹಾರಾಷ್ಟ್ರದಲ್ಲಿ ಮಹತ್ವದ ಕ್ರಮ ಕೈಗೊಂಡಿದೆ.
ಪುಣೆ ಐಸಿಸ್ ಭಯೋತ್ಪಾದನಾ ಘಟಕ ಪ್ರಕರಣದ 7 ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಆರೋಪಿಗಳು ಭಯೋತ್ಪಾದನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಭಯೋತ್ಪಾದಕ ಸಂಘಟನೆಗೆ ಹಣ ಸಂಗ್ರಹಿಸುವಲ್ಲಿ ತೊಡಗಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ತಿಳಿಸಿದೆ.
ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ
ಪುಣೆ ಐಸಿಸ್ ಭಯೋತ್ಪಾದನಾ ಘಟಕ ಪ್ರಕರಣದಲ್ಲಿ ಎನ್‌ಐಎ ಎಲ್ಲಾ ಏಳು ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ), ಸ್ಫೋಟಕ ವಸ್ತುಗಳ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಮಧ್ಯಪ್ರದೇಶದಲ್ಲೂ 17 ಜನರ ವಿರುದ್ಧ ಚಾರ್ಜ್‌ಶೀಟ್
ಮಧ್ಯಪ್ರದೇಶದಲ್ಲಿ ನಡೆದ ಪ್ರಕರಣವೊಂದರಲ್ಲಿ 17 ಜನರ ವಿರುದ್ಧ ಸಮಗ್ರ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಹೇಳಿಕೆ ನೀಡಿದೆ. ಭೋಪಾಲ್‌ನ ವಿಶೇಷ ಕಾರ್ಯಪಡೆ (ಎಸ್‌ಟಿಎಫ್)/ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆರಂಭದಲ್ಲಿ ಪ್ರಕರಣವನ್ನು ದಾಖಲಿಸಿತ್ತು. ಹಿಜ್ಬ್-ಉತ್-ತಹ್ರೀರ್ (ಎಚ್‌ಯುಟಿ) ಸದಸ್ಯರು ಮಧ್ಯಪ್ರದೇಶದಲ್ಲಿ ತಮ್ಮ ಕೇಡರ್ ಅನ್ನು ರಹಸ್ಯವಾಗಿ ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂದು ಎನ್‌ಐಎ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎನ್ಐಎ ತಿಳಿಸಿದೆ.