ಕಾಸರಗೋಡು: ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ತಮ್ಮ ಶಾಸಕ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ವಕೀಲ ಕೆ ಶ್ರೀಕಾಂತ್ ಆಗ್ರಹಿಸಿದ್ದಾರೆ.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ವಿಚಾರವಾಗಿ ಮುಸ್ಲಿಂ ಲೀಗ್ ಮುಖಂಡರು ಚುನಾವಣಾಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ಒಂದು ಚುನಾವಣಾ ವಿಧ್ವಂಸಕವಾಗಿದೆ. ಅಶ್ರಫ್ ಅವರ ಶಿಕ್ಷೆಯನ್ನು ಯಾವುದೇ ಜನಪರ ಹೋರಾಟಕ್ಕಾಘಿ ಲಭಿಸಿದ ಶಿಕ್ಷೆಯಾಗಿ ಲಘುವಾಗಿ ಪರಿಗಣಿಸಲಾಗದು. ಮಂಜೇಶ್ವರ ಶಾಸಕ ಅಶ್ರಫ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಿದ್ದಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಮತದಾರರ ಪಟ್ಟಿಯಲ್ಲಿ ನಕಲಿ ಹೆಸರು ಸೇರ್ಪಡೆಗೊಳಿಸಿ, ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡುವ ಮೂಲಕ ಮುಸ್ಲಿಂ ಲೀಗ್ ಚುನಾವಣೆಯನ್ನು ಬುಡಮೇಲುಗೊಳಿಸುತ್ತಿರುವುದಕ್ಕೆ ನ್ಯಾಯಾಲಯದ ತೀರ್ಪು ಸಾಕ್ಷಿಯಾಗಿದೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುವುದಾಗಿ ಶ್ರೀಕಾಂತ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.