ತಿರುವನಂತಪುರಂ: ರಾಜ್ಯ ಸರ್ಕಾರದ ಕೇರಳೀಯಂ ಕಾರ್ಯಕ್ರಮದಲ್ಲಿ ಅರಣ್ಯವಾಸಿಗಳನ್ನು ಪ್ರದರ್ಶನ ವಸ್ತುವನ್ನಾಗಿ ಮಾಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮಧ್ಯಪ್ರವೇಶಿಸಿದೆ.
ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗವು ಘಟನೆಯ ಕುರಿತು ಮುಖ್ಯ ಕಾರ್ಯದರ್ಶಿಯಿಂದ ವರದಿ ಕೇಳಿದೆ. ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಡಿಜಿಪಿ ಮತ್ತು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ.
ಯುವಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ಪಿ.ಶ್ಯಾಮರಾಜ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಕೇಂದ್ರ ಪರಿಶಿಷ್ಟ ಪಂಗಡಗಳ ಆಯೋಗವು ಈ ವಿಷಯದಲ್ಲಿ ಮಧ್ಯಪ್ರವೇಶಿಸಿದೆ. ಮೂರು ದಿನಗಳೊಳಗೆ ವರದಿ ಸಲ್ಲಿಸದಿದ್ದರೆ ಖುದ್ದು ಹಾಜರಾಗುವಂತೆಯೂ ಆಯೋಗ ತಿಳಿಸಿದೆ.