ತಿರುವನಂತಪುರಂ: ಮತದಾರರ ಪಟ್ಟಿಯನ್ನು ಕೂಲಂಕಷವಾಗಿ ಪರಿಶೀಲಿಸಲು ರಾಜಕೀಯ ಪಕ್ಷಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 27 ರಂದು ಪ್ರಕಟಿಸಲಾದ ಮತದಾರರ ಪಟ್ಟಿಯನ್ನು ತಾಲೂಕು ಕಚೇರಿಗಳಲ್ಲಿ ಪಡೆಯಬಹುದು. ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿಯ ಪರಿಷ್ಕರಣೆ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ನವೆಂಬರ್ 24 ಮತ್ತು 25, ಡಿಸೆಂಬರ್ 2 ಮತ್ತು 3 ರಂದು ವಿಶೇಷ ಪ್ರಚಾರದ ದಿನಗಳಾಗಿವೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜಯ್ ಕೌಲ್ ಮಾಹಿತಿ ನೀಡಿದ್ದಾರೆ. ಅಂತಿಮ ಮತದಾರರ ಪಟ್ಟಿ ಪ್ರಕಟಿಸುವ ಕುರಿತು ಮುಖ್ಯ ಚುನಾವಣಾಧಿಕಾರಿಗಳು ಇಂದು ಬೆಳಗ್ಗೆ 11.30ಕ್ಕೆ ವಿಧಾನಸೌಧದ ಸಂಕೀರ್ಣದ ಸಭಾಂಗಣದಲ್ಲಿ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನಾ ಸಭೆ ನಡೆಸಿರುವರು.