ರಾಂಚಿ: ವೇಗವಾಗಿ ಚಲಿಸುತ್ತಿದ್ದ ರೈಲಿಗೆ ಹಠಾತನೇ ಬ್ರೇಕ್ ಹಾಕಿದ ಪರಿಣಾದ ಉಂಟಾದ ಜರ್ಕ್‌ನಿಂದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಂಚಿ: ವೇಗವಾಗಿ ಚಲಿಸುತ್ತಿದ್ದ ರೈಲಿಗೆ ಹಠಾತನೇ ಬ್ರೇಕ್ ಹಾಕಿದ ಪರಿಣಾದ ಉಂಟಾದ ಜರ್ಕ್‌ನಿಂದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪುರಿ-ನವದೆಹಲಿ ಪುರುಷೋತ್ತಮ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಜಾರ್ಜಂಡ್‌ನ ಪರ್ಸಾಬಾದ್ ಬಳಿ ಈ ಅವಘಡ ಸಂಭವಿಸಿದೆ.
ಹಠಾತ್ ಬ್ರೇಕ್ ಹಾಕಿದಾಗ ರೈಲು ಗಂಟೆಗೆ 130 ಕೀ.ಮೀ ವೇಗದಲ್ಲಿ ಚಲಿಸುತ್ತಿತ್ತು. ಜರ್ಕ್‌ನಿಂದ ಹಲವರಿಗೆ ಗಾಯಗಳಾಗಿವೆ, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಎಂದು ಧನ್‌ಬಾದ್ ರೈಲ್ವೆ ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಅಮರೇಶ್ ಕುಮಾರ್ ಹೇಳಿದ್ದಾರೆ.
ಈ ಘಟನೆಯಿಂದಾಗಿ ಈ ಮಾರ್ಗದಲ್ಲಿ ರೈಲು ಸಂಚಾರವು ನಾಲ್ಕು ಗಂಟೆಗಳ ಕಾಲ ಸ್ಥಗಿತಗೊಂಡ ನಂತರ ಪುನರಾರಂಭವಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.