ಕೋಲ್ಕತ್ತ: ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೆ ತರುತ್ತದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಹೇಳಿದರು.
ಕೋಲ್ಕತ್ತ: ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೆ ತರುತ್ತದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಹೇಳಿದರು.
2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಾಂದೋಲನಕ್ಕೆ ಚಾಲನೆ ನೀಡುವ ಸಲುವಾಗಿ ಬಿಜೆಪಿಯು ಕೋಲ್ಕತ್ತದಲ್ಲಿ ಬೃಹತ್ ರ‍್ಯಾಲಿ ಏರ್ಪಡಿಸಿತ್ತು.
ತುಷ್ಟೀಕರಣ, ಭ್ರಷ್ಟಾಚಾರದಲ್ಲಿ ಮುಳುಗಿರುವ ಟಿಎಂಸಿ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸುವ ಮೂಲಕ ಬಿಜೆಪಿಗೆ ಅಧಿಕಾರ ನೀಡಿ. ಅದಕ್ಕೆ ಮುನ್ನುಡಿಯನ್ನು 2024ರ ಲೋಕಸಭೆ ಚುನಾವಣೆಯಲ್ಲೇ ಬರೆಯಿರಿ ಎಂದು ಅಮಿತ್ ಶಾ ಕರೆ ನೀಡಿದರು.
ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ವಿಚಾರವಾಗಿ ಮಾತನಾಡಿದ ಶಾ, 'ವಿರೋಧಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಸಿಎಎ ಅಡಿ ನಿಯಮಗಳನ್ನು ರೂಪಿಸಲಿದೆ ಎಂದು ಹೇಳಿದರು.
ಅಮಿತ್ ಶಾ ಅವರಿಗೆ ತಿರುಗೇಟು ನೀಡಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯ ಡೆರಿಕ್ ಒಬ್ರಿಯಾನ್, ಯುವಕರಿಗಾಗಿ ಉದ್ಯೋಗ ಸೃಷ್ಟಿಸುವ ಬಗ್ಗೆ, ಬೆಲೆ ಏರಿಕೆ, ಪಶ್ಚಿಮ ಬಂಗಾಳಕ್ಕೆ ಕೇಂದ್ರ ಬಾಕಿ ನೀಡಬೇಕಿರುವ ನರೇಗಾ ನಿಧಿ ಕುರಿತು ಅಮಿತ್ ಶಾ ಒದು ಪದವನ್ನೂ ಮಾತನಾಡಲಿಲ್ಲ ಎಂದರು.