HEALTH TIPS

ಪಂಚ ರಾಜ್ಯಗಳ ಚುನಾವಣಾ ಕಣದಲ್ಲಿ: ಪ್ರಧಾನಿ ಮೋದಿ ವಿಡಿಯೊ ಸಂದೇಶ

               ವದೆಹಲಿ: ರಾಜ್ಯವನ್ನು ಮಾರ್ವೆಲ್ಲಸ್‌ ಮಿಜೋರಾಂ (ಅದ್ಭುತ ಮಿಜೋರಾಂ) ಆಗಿ ಪರಿವರ್ತಿಸಲು ಬಿಜೆಪಿ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಮಿಜೋರಾಂ ಜನ ತಮ್ಮ ಕುಟುಂಬದ ಸದಸ್ಯರಿದ್ದಂತೆ ಎಂದಿರುವ ಅವರು, ರೈಲ್ವೆ, ಆರೋಗ್ಯ, ಕ್ರೀಡೆ ಹಾಗೂ ಇತರ ಕ್ಷೇತ್ರಗಳಲ್ಲಿ ರಾಜ್ಯದ ಅಭಿವೃದ್ಧಿಗೆ ಕೇಂದ್ರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದಿದ್ದಾರೆ.

                 ಜೈನಮುನಿ ಭೇಟಿ: ಛತ್ತೀಸಗಢದ ಡೊಂಗರ್‌ಗಢಕ್ಕೆ ಭಾನುವಾರ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಜೈನಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜ್‌ ಅವರನ್ನು ಭೇಟಿ ಮಾಡಿದರು. ಬಳಿಕ, ಮಾತೆ ಬಾಮ್ಲೇಶ್ವರಿ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ರಮಣ್‌ ಸಿಂಗ್‌ ಅವರು ಮೋದಿ ಜೊತೆ ಇದ್ದರು.

                   5ನೇ ಪಟ್ಟಿ ಬಿಡುಗಡೆ: ರಾಜಸ್ಥಾನ ಬಿಜೆಪಿ ತನ್ನ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳಲ್ಲಿ ಕೆಲವರು ಇದೇ ಮೊದಲ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಮಾವ್ಲಿ ಕ್ಷೇತ್ರದ ಹಾಲಿ ಶಾಸಕ ಧರ್ಮನಾರಾಯಣ್‌ ಜೋಶಿ ಅವರಿಗೆ ಈ ಬಾರಿ ಟಿಕೆಟ್‌ ನೀಡಿಲ್ಲ. ಬದಲಾಗಿ ಕೆ.ಜಿ. ಪಾಲಿವಾನ್‌ ಅವರನ್ನು ಕಣಕ್ಕಿಳಿಸಲಾಗಿದೆ. ಸಿವಿಲ್‌ ಲೈನ್ಸ್‌, ಆದರ್ಶ ನಗರ ಕ್ಷೇತ್ರಗಳಲ್ಲೂ ಹೊಸಬರಿಗೆ ಅವಕಾಶ ನೀಡಲಾಗಿದೆ.

                     'ಆರ್ಥಿಕ ಅಸಮಾನತೆ ಹೆಚ್ಚಳ': ಉಚಿತ ಆಹಾರ ಧಾನ್ಯ ವಿತರಣೆ ಯೋಜನೆಯನ್ನು ಮುಂದಿನ ಐದು ವರ್ಷಗಳಿಗೆ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧಾರ ತೆಗದುಕೊಂಡಿರುವುದು ದೇಶದಲ್ಲಿ ಆರ್ಥಿಕ ಸಂಕಷ್ಟ ದೊಡ್ಡ ಪ್ರಮಾಣದಲ್ಲಿ ಮುಂದುವರೆದಿರುವುದನ್ನು ಸೂಚಿಸುತ್ತದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು ಹೇಳಿದ್ದಾರೆ.

ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿದೆ. ದೇಶದ ಬಹುತೇಕರ ಆದಾಯವು ಅವುಗಳನ್ನು ಕೊಳ್ಳುವಷ್ಟು ಹೆಚ್ಚಾಗಿಲ್ಲ. ದೇಶದಲ್ಲಿ ಆರ್ಥಿಕ ಅಸಮಾನತೆ ಹೆಚ್ಚಾಗುತ್ತಿದೆ ಎಂಬುದನ್ನು ಇದು ತೋರುತ್ತದೆ ಎಂದಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries