ವಾಷಿಂಗ್ಟನ್: 'ಯಾವುದೇ ರೂಪದ ಭಯೋತ್ಪಾದನೆಯನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಹಿಂಸಾಚಾರದ ವಿರುದ್ಧವೂ ನಿಲ್ಲುತ್ತೇವೆ 'ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ರುಸಿರಾ ಕಾಂಬೋಜ್ ಹೇಳಿದರು.
ಯಾವುದೇ ರೂಪದ ಭಯೋತ್ಪಾದನೆಯನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ನಾವು ಹಿಂಸೆಯ ವಿರುದ್ಧವೂ ನಿಲ್ಲುತ್ತೇವೆ. ಮಾನವೀಯ ಆಧಾರಿತ ತಾತ್ಕಾಲಿಕ ಕದನ ವಿರಾಮ ಪ್ರಯತ್ನಗಳನ್ನು ಭಾರತ ಬೆಂಬಲಿಸುತ್ತದೆ. ಯುದ್ಧಪೀಡಿತ ಪ್ರದೆಶದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಜೀವನೋಪಾಯವನ್ನು ಒದಗಿಸುವುದು ಮತ್ತು ಒತ್ತೆಯಾಳುಗಳನ್ನು ಬೇಷರತ್ತಾಗಿ ಬಿಡುಗಡೆ ಮಾಡುವುದನ್ನು ಭಾರತ ಎದುರು ನೋಡುತ್ತಿದೆ ಶಾಂತಿಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಹೇಳಿದರು.