ಕೊಚ್ಚಿ: ರಾಜ್ಯದ ಆರಾಧನಾಲಯಗಳಲ್ಲಿ ಸಿಡಿಮದ್ದು ಬಳಸದಂತೆ ಹೈಕೋರ್ಟ್ ನಿಷೇಧ ಹೇರಿದೆ. ಪಟಾಕಿಯಿಂದ ಪರಿಸರ ಮತ್ತು ಶಬ್ದ ಮಾಲಿನ್ಯ ಉಂಟಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಸಿಡಿಮದ್ದು ಸಿಡಿಸದಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿದೆ. ಸಿಡಿಮದ್ದಿನಿಂದ ಜನರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ನ್ಯಾಯಾಲಯ ಗಮನ ಸೆಳೆದಿದೆ.
ಮರಾಡ್ ಎಂಬಲ್ಲಿಯ ದೇವಸ್ಥಾನದಲ್ಲಿ ಸಿಡಿಮದ್ದು ಬಳಸುವುದನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ನ್ಯಾಯಮೂರ್ತಿ ಅಮಿತ್ ರಾವಲ್ ಅವರು ಆದೇಶ ಹೊರಡಿಸಿದ್ದಾರೆ.