ಲಂಡನ್: ಬ್ರಿಟನ್‌ಗೆ ಐದು ದಿನಗಳ ಪ್ರವಾಸ ಕೈಗೊಂಡಿರುವ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ದೀಪಾವಳಿ ಪ್ರಯುಕ್ತ ಇಲ್ಲಿನ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರಕ್ಕೆ ಭೇಟಿ ನೀಡಿ, ವಿಶ್ವದಲ್ಲಿರುವ ಭಾರತೀಯ ಸಮುದಾಯದವರ ಸುಖ, ಶಾಂತಿ, ಸೌಹಾರ್ದ ಮತ್ತು ಅಭಿವೃದ್ಧಿಯಾಗಲಿ ಎಂದು ಪ್ರಾರ್ಥಿಸಿದರು.

ಈ ಸಂಬಂಧ 'ಎಕ್ಸ್' ವೇದಿಕೆಯಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೂ ಮುನ್ನ ಜೈಶಂಕರ್ ಅವರು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿದರು.
ಡೌನಿಂಗ್ ಸ್ಟ್ರೀಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಏರ್ಪಡಿಸಿದ ದೀಪಾವಳಿ ಚಹಾ ಕೂಟದಲ್ಲಿ ಎಸ್. ಜೈಶಂಕರ್ ದಂಪತಿ ಭಾಗಿಯಾಗಿದ್ದರು.