ರಾಯ್‌ಪುರ: ಛತ್ತೀಸ್‌ಗಢದಲ್ಲಿ ಮಾವೋವಾದಿಗಳು ಚುನಾವಣಾ ಪ್ರಚಾರದಲ್ಲಿದ್ದ ಬಿಜೆಪಿ ನಾಯಕನನ್ನು ಹತ್ಯೆ ಮಾಡಿದ್ದಾರೆ.
ನಾರಾಯಣಪುರ ಬಿಜೆಪಿಯ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದ ರತನ್ ದುಬೆ ಹತ್ಯೆಗೀಡಾದವರು. ಮೊದಲ ಹಂತದ ಮತದಾನಕ್ಕೆ ಮೂರು ದಿನಗಳು ಮಾತ್ರ ಬಾಕಿ ಇರುವಾಗ ಮಾವೋವಾದಿಗಳು ದುಷ್ಕೃತ್ಯವೆಸಗಿದ್ದಾರೆ. ರತನ್ ದುಬೆ ಚುನಾವಣಾ ಪ್ರಚಾರದಲ್ಲಿದ್ದರು, ಕೌಶಲನರ್ ಪ್ರದೇಶದಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದುಬೆ ಅವರು ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದು ಕೌಶಲನೇರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಹತ್ಯೆಯ ತನಿಖೆಗಾಗಿ ತಂಡವೊಂದು ಸ್ಥಳಕ್ಕೆ ತಲುಪಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯದಲ್ಲಿ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.