ತಿರುವನಂತಪುರಂ: ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರು ರಾಜ್ಯ ವಿಧಾನಸಭೆ ಅಂಗೀಕರಿಸಿದ ಏಳು ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಬಿಟ್ಟುಕೊಟ್ಟಿದ್ದಾರೆ.
ವಿಧಾನಸಭೆ ಅಂಗೀಕರಿಸಿದ ವಿಧೇಯಕಗಳ ಕುರಿತು ನಿರ್ಣಯ ಕೈಗೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್‍ನಲ್ಲಿ ಮೊಕದ್ದಮೆ ಹೂಡಿತ್ತು. ಇಂದು ಪ್ರಕರಣದ ವಿಚಾರಣೆ ನಡೆಯಲಿರುವ ಸಂದರ್ಭದಲ್ಲಿ ರಾಜ್ಯಪಾಲರು ವಿಧೇಯಕಗಳನ್ನು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ.
ಲೋಕಾಯುಕ್ತ ಮಸೂದೆ, ವಿಶ್ವವಿದ್ಯಾನಿಲಯಗಳ ಕಾಯ್ದೆ ತಿದ್ದುಪಡಿ ವಿಧೇಯಕ (ಎರಡು), ಕುಲಪತಿಗಳ ಮಸೂದೆ, ಸಹಕಾರ ಕಾಯ್ದೆ ತಿದ್ದುಪಡಿ ಮಸೂದೆ, ಶೋಧನಾ ಸಮಿತಿ ವಿಸ್ತರಣೆ ಮಸೂದೆ ಮತ್ತು ಸಹಕಾರ ಮಸೂದೆ (ಮಿಲ್ಮಾ) ರಾಷ್ಟ್ರಪತಿಗಳಿಗೆ ಕಳುಹಿಸಲಾದ ಮಸೂದೆಗಳು. ಇದೇ ವೇಳೆ ಸಾರ್ವಜನಿಕ ಆರೋಗ್ಯ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದರು.