ನವದೆಹಲಿ: ಛತ್ತೀಸಗಢ ವಿಧಾನಸಭೆ ಚುನಾವಣೆಯಲ್ಲಿ ಪುರುಷ ಮತದಾರರಿಗಿಂತ ಸುಮಾರು 64,000ದಷ್ಟು ಹೆಚ್ಚು ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿಅಂಶದಿಂದ ತಿಳಿದುಬಂದಿದೆ.
ನವದೆಹಲಿ: ಛತ್ತೀಸಗಢ ವಿಧಾನಸಭೆ ಚುನಾವಣೆಯಲ್ಲಿ ಪುರುಷ ಮತದಾರರಿಗಿಂತ ಸುಮಾರು 64,000ದಷ್ಟು ಹೆಚ್ಚು ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿಅಂಶದಿಂದ ತಿಳಿದುಬಂದಿದೆ.
ಒಟ್ಟು 90 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 50 ಕ್ಷೇತ್ರಗಳಲ್ಲಿ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 1.55 ಕೋಟಿ ಮತದಾರರು ಮತ ಚಲಾಯಿಸಿದ್ದಾರೆ. ಅವರಲ್ಲಿ 78.12 ಲಕ್ಷ ಮಂದಿ ಮಹಿಳೆಯರಿದ್ದರೆ, 77.48 ಲಕ್ಷ ಮಂದಿ ಪುರುಷರಿದ್ದಾರೆ ಎಂದು ಅಂಕಿಅಂಶದಿಂದ ತಿಳಿದುಬಂದಿದೆ.
ರಾಜ್ಯದಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುತ್ತಿದ್ದರೂ ಚುನಾವಣೆಯಲ್ಲಿ ಮಹಿಳೆಯರನ್ನು ಕಣಕ್ಕಿಳಿಸಲು ಪ್ರಮುಖ ರಾಜಕೀಯ ಪಕ್ಷಗಳು ಹೆಚ್ಚು ಆಸಕ್ತಿ ತೋರಲಿಲ್ಲ. 18 ಮಹಿಳಾ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು, ಬಿಜೆಪಿ 15 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.
ಆದರೆ, ಮಧ್ಯಪ್ರದೇಶ ಚುನಾವಣೆಯ ಸನ್ನಿವೇಶ ಇದಕ್ಕಿಂತ ಭಿನ್ನವಾಗಿದೆ. ರಾಜ್ಯದಲ್ಲಿ ಶೇ 78.21 ಪುರುಷ ಮತದಾರರು ಮತ್ತು ಶೇ 76.03 ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ. 230 ವಿಧಾನಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 30 ಮಹಿಳಾ ಅಭ್ಯರ್ಥಿಗಳನ್ನು ಮತ್ತು ಬಿಜೆಪಿ 20 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.
ಎರಡೂ ಪಕ್ಷಗಳು ಮಹಿಳಾ ಮತದಾರರನ್ನು ಸೆಳೆಯಲು ಹಲವಾರು ಭರವಸೆಗಳನ್ನೂ ನೀಡಿದ್ದವು.