ಕೊಚ್ಚಿ: ಕುಸಾಟ್‍ನಲ್ಲಿ ಟೆಕ್ ಫೆಸ್ಟ್‍ನ ಅಂಗವಾಗಿ ನಡೆದ ಗೀತೋತ್ಸವದ ವೇಳೆ ಸಂಭವಿಸಿದ ದುರಂತದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳನ್ನು ಸಿದ್ಧಪಡಿಸುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸೂಚನೆ ನೀಡಿದ್ದಾರೆ.
ಸಚಿವರುಗಳಾದ ಪಿ. ರಾಜೀವ್, ಆರ್. ಬಿಂದು ಕಲಮಸೇರಿಗೆ ಆಗಮಿಸಿದ್ದಾರೆ. ಆರೋಗ್ಯ ಸಚಿವರು ಕೋಝಿಕ್ಕೋಡ್‍ನಿಂದ ಚಿಕಿತ್ಸೆಗೆ ವ್ಯವಸ್ಥೆಗೆ ಸೂಚಿಸಿದ್ದಾರೆ.
ಅವಘಡದ ನಂತರ ವೈದ್ಯರು ಸೇರಿದಂತೆ ಆರೋಗ್ಯ ಕಾರ್ಯಕರ್ತರು ಕಲಮಸೇರಿ ವೈದ್ಯಕೀಯ ಕಾಲೇಜು ಮತ್ತು ಎರ್ನಾಕುಳಂ ಜನರಲ್ ಆಸ್ಪತ್ರೆಗೆ ತಲುಪಿದ್ದಾರೆ ಎಂದು ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಮುಂದಿನ ವ್ಯವಸ್ಥೆ ಮಾಡುವಂತೆ ಆರೋಗ್ಯ ಇಲಾಖೆ ನಿರ್ದೇಶಕರು ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕರಿಗೆ ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳಿಗೂ ಸಜ್ಜಾಗುವಂತೆ ಸೂಚನೆ ನೀಡಲಾಗಿದೆ. ಸಮರ್ಪಕವಾಗಿ ಕಣಿವ್ 108 ಆಂಬ್ಯುಲೆನ್ಸ್ ಸಿದ್ಧಪಡಿಸುವಂತೆಯೂ ನಿರ್ದೇಶನ ನೀಡಿದೆ.
ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಟೆಕ್ ಫೆಸ್ಟ್‍ನ ಅಂಗವಾಗಿ ನಡೆದ ಗೀತೆ ಉತ್ಸವದ ವೇಳೆ ಕಾಲ್ತುಳಿತದಲ್ಲಿ ಇಬ್ಬರು ಬಾಲಕಿಯರು ಮತ್ತು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಸುಮಾರು ಐವತ್ತು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೃತರ ಹೆಸರು ಲಭ್ಯವಾಗಿಲ್ಲ.
ಅನಾಹುತದ ಹಿನ್ನೆಲೆಯಲ್ಲಿ ಇಂದು ನವಕೇರಳ ಸಮಾವೇಶ ಇರುವುದಿಲ್ಲ ಎಂದು ಸರ್ಕಾರ ಘೋಷಿಸಿದೆ.