ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಎರಡು ತಿಂಗಳ ಬಳಿಕ ಕೆನಡಾ ಪ್ರಜೆಗಳಿಗೆ ಇ- ವೀಸಾ ಸೇವೆಯನ್ನು ಕೇಂದ್ರ ಸರ್ಕಾರ ಪುನರಾರಂಭಿಸಿದೆ ಎಂದು ಮೂಲಗಳು ಬುಧವಾರ ಹೇಳಿವೆ.
ಸೆಪ್ಟೆಂಬರ್‌ನಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಬಗ್ಗೆ ಭಾರತದ ಮೇಲೆ ಆರೋಪ ಮಾಡಿದ್ದರು.
ಅದಾದ ಬಳಿಕ ಎರಡು ದೇಶಗಳ ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಎರಡೂ ದೇಶಗಳಿಂದ ರಾಯಭಾರಿಗಳು ಹಾಗೂ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲಾಗಿತ್ತು.
ಕೆನಡಾದ ಭದ್ರತಾ ಏಜೆನ್ಸಿಗಳು ಭಾರತೀಯ ಸರ್ಕಾರಿ ಏಜೆಂಟ್‌ಗಳು ಮತ್ತು ನಿಜ್ಜರ್ ಸಾವಿನ ನಡುವಿನ ಸಂಬಂಧವನ್ನು ತನಿಖೆ ನಡೆಸುತ್ತಿವೆ, ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು.