ತಿರುಪತಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ಬೆಳಿಗ್ಗೆ 8 ಗಂಟೆ ಸುಮಾರಿಗೆ ತಿರುಮಲದಲ್ಲಿರುವ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ತಿರುಪತಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ಬೆಳಿಗ್ಗೆ 8 ಗಂಟೆ ಸುಮಾರಿಗೆ ತಿರುಮಲದಲ್ಲಿರುವ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
'140 ಕೋಟಿ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥಿಸಲಾಯಿತು' ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾನುವಾರ ರಾತ್ರಿಯೇ ಪ್ರಧಾನಿ ತಿರುಮಲಕ್ಕೆ ಆಗಮಿಸಿದ್ದರು. ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಮತ್ತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ರೇಣಿಗುಂಟಾ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡಿದ್ದರು. ದೇವರ ದರ್ಶನದ ನಂತರ ಪ್ರಧಾನಿ ತೆಲಂಗಾಣಕ್ಕೆ ತೆರಳಲಿದ್ದಾರೆ.