ಮಥುರಾ: ಪ್ರಧಾನಿ ನರೇಂದ್ರ ಮೋದಿ ಅವರು ಮಥುರಾದಲ್ಲಿನ ಶ್ರೀ ಕೃಷ್ಣ ಜನ್ಮಭೂಮಿ ದೇವಾಲಯಕ್ಕೆ ತೆರಳಿ ಗುರುವಾರ ಪ್ರಾರ್ಥನೆ ಸಲ್ಲಿಸಿದರು.
ಮಥುರಾ: ಪ್ರಧಾನಿ ನರೇಂದ್ರ ಮೋದಿ ಅವರು ಮಥುರಾದಲ್ಲಿನ ಶ್ರೀ ಕೃಷ್ಣ ಜನ್ಮಭೂಮಿ ದೇವಾಲಯಕ್ಕೆ ತೆರಳಿ ಗುರುವಾರ ಪ್ರಾರ್ಥನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮೀರಾಬಾಯಿ ಅವರ ನಾಣ್ಯ ಮತ್ತು ಅಂಚೆಚೀಟಿ ಬಿಡುಗಡೆ ಮಾಡಲಿದ್ದಾರೆ. ನಟಿ, ರಾಜಕಾರಣಿ ಹೇಮಾ ಮಾಲಿನಿ ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೀರಾ ಬಾಯಿ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಮೋದಿ, 'ಶುದ್ಧ ಭಕ್ತಿ ನಂಬಿಕೆಗೆ ಮೀರಾಬಾಯಿ ಉತ್ತಮ ಉದಾಹರಣೆಯಾಗಿದ್ದಾರೆ. ಭಗವಾನ್ ಶ್ರೀ ಕೃಷ್ಣನಿಗೆ ಸಮರ್ಪಿತವಾದ ಅವಳ ಸ್ತೋತ್ರಗಳು ಮತ್ತು ದ್ವಿಪದಿಗಳು ಇಂದಿಗೂ ನಮ್ಮೆಲ್ಲರ ಹೃದಯಗಳನ್ನು ಗೌರವದಿಂದ ತುಂಬುತ್ತವೆ' ಎಂದು ಬರೆದುಕೊಂಡಿದ್ದರು.