ಉತ್ತರಾಖಂಡ: ಉತ್ತರಕಾಶಿಯಲ್ಲಿ ಕುಸಿದಿರುವ ಸುರಂಗದಡಿಯಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಹವಾಮಾನ ಇಲಾಖೆ ನೀಡಿರುವ ಮಳೆ ಮತ್ತು ತಾಪಮಾನವು 4 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಮುನ್ಸೂಚನೆ ಕಾರ್ಯಾಚರಣೆಗೆ ಮತ್ತೆ ಅಡ್ಡಿ ಮಾಡುವ ಲಕ್ಷಣಗಳು ಕಾಣುತ್ತಿವೆ.

ಹವಾಮಾನ ಇಲಾಖೆಯು ಉತ್ತರಾಖಂಡದಲ್ಲಿ 4,000 ಮೀಟರ್‌ಗಿಂತ ಹೆಚ್ಚಿನ ಪ್ರದೇಶಗಳಲ್ಲಿ ಹಿಮಪಾತದ ಮುನ್ಸೂಚನೆ ನೀಡಿದೆ. ಅಲ್ಲದೆ ಮಳೆಯ ಜತೆ ಗುಡುಗು, ಆಲಿಕಲ್ಲು ಇರಬಹುದು ಎಂದೂ ಹೇಳಿದೆ.
ಕಾಮಗಾರಿ ನಡೆಸುತ್ತಿದ್ದ ವೇಳೆ ನವೆಂಬರ್ 12 ರಂದು ಸುರಂಗ ಕುಸಿದು 41 ಕಾರ್ಮಿಕರು 4.5-ಕಿಲೋಮೀಟರ್ (3-ಮೈಲಿ) ಸುರಂಗದಲ್ಲಿ ಸಿಲುಕಿದ್ದಾರೆ. ಕಳೆದ 15 ದಿನಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಲೇ ಇದೆ.
ಪ್ರತಿಕೂಲ ಹವಾಮಾನ ಪರಿಸ್ಥಿತಿ, ಯಂತ್ರಗಳಲ್ಲಿನ ಸಮಸ್ಯೆ ಕಾರಣದಿಂದಾಗಿ ರಕ್ಷಣಾ ಕಾರ್ಯಕ್ಕೆ ಒಂದಲ್ಲ ಒಂದು ಸವಾಲು ಎದುರಾಗುತ್ತಲೇ ಇದೆ. ಆದರೆ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ರಕ್ಷಣಾ ಸಿಬ್ಬಂದಿ ಸಜ್ಜುಗೊಂಡಿದ್ದಾರೆ. ಪ್ರತಿ ಸನ್ನಿವೇಶದಲ್ಲಿ ಕೆಲಸ ಮಾಡಲು ತರಬೇತಿ ಪಡೆದಿದ್ದಾರೆ ಆದ್ದರಿಂದ ನಮಗೆ ಚಿಂತೆ ಇಲ್ಲ ಎಂದು ಎನ್‌ಎಚ್‌ಐಡಿಸಿಎಲ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮಹಮೂದ್ ಅಹ್ಮದ್ ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ಮಾಹಿತಿ ಹಂಚಿಕೊಂಡಿದ್ದಾರೆ.