ಮುಂಬೈ: ನಗರದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂದು ಭಾರತ -ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ.
ಮುಂಬೈ: ನಗರದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂದು ಭಾರತ -ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ.
ಭಾರತ -ನ್ಯೂಜಿಲೆಂಡ್ ಪಂದ್ಯಕ್ಕೆ ಅಡ್ಡಿಯುಂಟು ಮಾಡುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಬೆದರಿಕೆ ಸಂದೇಶವನ್ನು ರವಾನಿಸಿದ್ದಾರೆ.
ಮುಂಬೈ ಪೊಲೀಸರ ಅಧಿಕೃತ ಹ್ಯಾಂಡಲ್ ಅನ್ನು ಟ್ಯಾಗ್ ಮಾಡುವ ಮೂಲಕ ಬೆದರಿಕೆ ಸಂದೇಶವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಪೋಸ್ಟರ್‌ನಲ್ಲಿ ಬಂದೂಕು, ಗುಂಡು ಸೇರಿದಂತೆ ಹ್ಯಾಂಡ್ ಗ್ರೆನೇಡ್ ಚಿತ್ರವೂ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬೆದರಿಕೆ ಬೆನ್ನಲ್ಲೇ ವಾಂಖೆಡೆ ಕ್ರೀಡಾಂಗಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.