ನವದೆಹಲಿ: ಹಮಾಸ್ ಉಗ್ರರು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ಮತ್ತು ಘರ್ಷಣೆಯಿಂದ ಉಂಟಾದ ಅಮಾಯಕ ನಾಗರಿಕರ ಸಾವನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿ: ಹಮಾಸ್ ಉಗ್ರರು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ಮತ್ತು ಘರ್ಷಣೆಯಿಂದ ಉಂಟಾದ ಅಮಾಯಕ ನಾಗರಿಕರ ಸಾವನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತದ ಆತಿಥ್ಯದಲ್ಲಿ ನಡೆದ 'ವರ್ಚುವಲ್ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆ'ಯ ಎರಡನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ಹಮಾಸ್-ಇಸ್ರೇಲ್ ಸಂಘರ್ಷದಿಂದ ಉದ್ಭವಿಸುವ ಪರಿಸ್ಥಿತಿಯನ್ನು ನಿಭಾಯಿಸಲು ಭಾರತ, ಸಂಯಮದಿಂದ ಮಾತುಕತೆ ನಡೆಸಲು ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡಿದೆ ಎಂದರು.