HEALTH TIPS

ನರೇಗಾ ಯೋಜನೆ: ತುರ್ತು ನಿಧಿಯಿಂದ ₹10 ಸಾವಿರ ಕೋಟಿ ಬಿಡುಗಡೆ ಮಾಡಿದ ಆರ್ಥಿಕ ಇಲಾಖೆ

            ವದೆಹಲಿ: ಗ್ರಾಮೀಣ ಭಾಗದಲ್ಲಿ ಉದ್ಯೋಗ ಖಾತ್ರಿ ಯೋಜನೆಯಾದ ನರೇಗಾಕ್ಕೆ 2023-24ನೇ ಸಾಲಿನ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ₹60 ಸಾವಿರ ಕೋಟಿ ಮೀಸಲಿಟ್ಟಿದ್ದು, ಹೆಚ್ಚುವರಿಯಾಗಿ ₹10 ಸಾವಿರ ಕೋಟಿಯನ್ನು ಆರ್ಥಿಕ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದೆ.

               ಈ ವಿಷಯವನ್ನು ಲೋಕಸಭೆಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ರಾಜ್ಯ ಸಚಿವೆ ಸಾದ್ವಿ ನಿರಂಜನ ಜ್ಯೋತಿ ಅವರು ಮಂಗಳವಾರ ಉತ್ತರ ರೂಪದಲ್ಲಿ ತಿಳಿಸಿದರು.

               'ಪ್ರಸಕ್ತ ಬಜೆಟ್‌ನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ, ಸಾಧನ ಹಾಗೂ ನಿರ್ವಹಣೆಗಾಗಿ ₹66,629 ಕೋಟಿ ಹಣವನ್ನು ನ. 29ರವರೆಗೂ ನೀಡಲಾಗಿದೆ. ಹೆಚ್ಚುತ್ತಿರುವ ಉದ್ಯೋಗ ಬೇಡಿಕೆಯನ್ನು ಪರಿಗಣಿಸಿ ಇದೀಗ ಆರ್ಥಿಕ ಇಲಾಖೆಯು ತುರ್ತು ನಿಧಿಯಿಂದ ₹10 ಸಾವಿರ ಕೋಟಿಯನ್ನು ನೀಡಿದೆ' ಎಂದರು.

                 ಇದಕ್ಕೂ ಮೊದಲು ಸಂದರ್ಶನವೊಂದರಲ್ಲಿ ಮಾಹಿತಿ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್, 'ನರೇಗಾ ಯೋಜನೆಗಾಗಿ ಕೇಂದ್ರ ಸರ್ಕಾರವು ಹೆಚ್ಚುವರಿಯಾಗಿ ₹28 ಸಾವಿರ ಕೋಟಿ ಮಂಜೂರು ಮಾಡಿದೆ. ಇದು ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುವುದು' ಎಂದಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries