ತಿರುವನಂತಪುರಂ: ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ. 111 ಮಂದಿಗೆ ಕರೊನಾ ದೃಢಪಟ್ಟಿದೆ. ನಿನ್ನೆ 122 ಮಂದಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ಕೇರಳದಲ್ಲಿ ನಿನ್ನೆಯμÉ್ಟೀ 1634 ಸಕ್ರಿಯ ಪ್ರಕರಣಗಳು ವರದಿಯಾಗಿವೆ.
ರಾಜ್ಯದಲ್ಲಿ ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ಕೋಝಿಕ್ಕೋಡ್ ಮತ್ತು ಕಣ್ಣೂರಿನಲ್ಲಿ ಕರೋನಾ ಸಾವುಗಳು ವರದಿಯಾಗಿವೆ. ಮರಣೋತ್ತರ ಪರೀಕ್ಷೆಯಲ್ಲಿ ಇಬ್ಬರಿಗೂ ಕರೊನಾ ದೃಢಪಟ್ಟಿದೆ.
ಏತನ್ಮಧ್ಯೆ, ಕರೋನಾದ ಇತ್ತೀಚಿನ ರೂಪಾಂತರವಾದ ಒಮಿಕ್ರಾನ್ ಜೆಎನ್.1 ರಾಜ್ಯದಲ್ಲಿ ಬಲಗೊಳ್ಳುತ್ತಿದೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. ಸದ್ಯ ರಾಜ್ಯದಲ್ಲಿ ಜ್ವರ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿದಿನ 10,000 ಕ್ಕೂ ಹೆಚ್ಚು ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.