ನವದೆಹಲಿ: ಹೈಕೋರ್ಟ್‌ಗಳಿಗೆ 112 ನ್ಯಾಯಮೂರ್ತಿಗಳ ನೇಮಕ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಇದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ನವದೆಹಲಿ: ಹೈಕೋರ್ಟ್‌ಗಳಿಗೆ 112 ನ್ಯಾಯಮೂರ್ತಿಗಳ ನೇಮಕ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಇದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ನ್ಯಾಯಾಂಗದ ಉನ್ನತ ಹುದ್ದೆಗಳಿಗೆ ನೇಮಕ ಮಾಡುವುದು ಸಮನ್ವಯದಿಂದ ನಡೆಯಬೇಕಿರುವ ಕೆಲಸ. ಇದರಲ್ಲಿ ನ್ಯಾಯಾಂಗ ಹಾಗೂ ಕಾರ್ಯಾಂಗದ ಭಾಗವಹಿಸುವಿಕೆ ಇರುತ್ತದೆ. ಸಾಂವಿಧಾನಿಕ ಹುದ್ದೆಗಳಲ್ಲಿ ಇರುವ ಬೇರೆ ಬೇರೆ ವ್ಯಕ್ತಿಗಳಿಂದ ಅನುಮೋದನೆ ಪಡೆಯಬೇಕಾಗುತ್ತದೆ ಎಂದು ಮೇಘವಾಲ್ ಅವರು ಪ್ರಶ್ನೋತ್ತರ ಅವಧಿಯಲ್ಲಿ ಹೇಳಿದರು.