ತಿರುವನಂತಪುರಂ: ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, 128 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ದೇಶದಲ್ಲಿ ವರದಿಯಾಗಿರುವ ಒಟ್ಟು ಪ್ರಕರಣಗಳಲ್ಲಿ ಅರ್ಧದಷ್ಟು ಕೇರಳದಲ್ಲಿವೆ.
ಸೋಮವಾರ, ದೇಶದಲ್ಲಿ ಒಟ್ಟು 312 ಕರೋನಾ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 128 ಪ್ರಕರಣಗಳು ಕೇರಳದಿಂದ ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ರೋಗಿಗಳ ಸಂಖ್ಯೆ 3128 ಕ್ಕೆ ಏರಿಕೆಯಾಗಿದೆ.
ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಕರೊನಾ ಹರಡುವಿಕೆಯಲ್ಲಿ ಶೇಕಡಾ 54 ರಷ್ಟು ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರತಿ ಗಂಟೆಗೆ ನಾಲ್ಕು ಮಂದಿಗೆ ಸೋಂಕು ದೃಢಪಡುತ್ತಿದೆ ಎಂದು ವರದಿಯಾಗಿದೆ. ಕೇರಳದಲ್ಲಿ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿತರಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಕರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ರೋಗ ನಿಯಂತ್ರಣದಲ್ಲಿ ರಾಜ್ಯ ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ಅಂದಾಜಿಸಲಾಗಿದೆ. ಸಿದ್ಧತೆಗಳನ್ನು ಕೈಗೊಳ್ಳಲು ವಿಳಂಬವಾಗಿದೆ ಎಂದು ವರದಿಯಾಗಿದೆ. ಕೇರಳದ ಮಟ್ಟಿಗೆ ಓಮಿಕ್ರಾನ್ ತಳಿ ವ್ಯಾಪಕಗೊಂಡಿದೆ. ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ರೋಗ ಹರಡುವ ಸಾಧ್ಯತೆ ಹೆಚ್ಚುತ್ತದೆ ಎನ್ನುತ್ತಾರೆ ತಜ್ಞರು.