ತೆಂಗ್ನೌಪಾಲ್: ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಸೋಮವಾರ ಉಗ್ರಗಾಮಿಗಳ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 13 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ ಲೀತು ಗ್ರಾಮದಲ್ಲಿ ಈ ಗುಂಡಿನ ಕಾಳಗ ನಡೆದಿದೆ ಎಂದು ಅವರು ಹೇಳಿದ್ದಾರೆ.
"ಮ್ಯಾನ್ಮಾರ್‌ಗೆ ತೆರಳುತ್ತಿದ್ದ ಉಗ್ರಗಾಮಿಗಳ ಗುಂಪನ್ನು ಈ ಪ್ರದೇಶದಲ್ಲಿ ಪ್ರಬಲವಾಗಿರುವ ಮತ್ತೊಂದು ಗುಂಪಿನ ಬಂಡುಕೋರರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ" ಎಂದು ಹಿಲ್ ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಭದ್ರತಾ ಪಡೆಗಳು ಇದುವರೆಗೆ 13 ಶವಗಳನ್ನು ಪತ್ತೆ ಮಾಡಿದ್ದು, ಅವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ಆದರೆ ಅವರು ಸ್ಥಳೀಯರಲ್ಲ ಎಂದು ಹೇಳಿದ್ದಾರೆ.
ತೆಂಗ್ನೌಪಾಲ್ ಜಿಲ್ಲೆ ಮ್ಯಾನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿದೆ.