ನವದೆಹಲಿ : ಮಣಿಪುರದ ತೆಂಗ್ನೋಪಾಲ್ ಜಿಲ್ಲೆಯ ಲೀತು ಗ್ರಾಮದಲ್ಲಿ ಈಚೆಗೆ 13 ಮಂದಿಯನ್ನು ಹತ್ಯೆ ಮಾಡಲಾಗಿದೆ ಎಂಬ ಮಾಧ್ಯಮ ವರದಿಯನ್ನು ಆಧರಿಸಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ರಾಜ್ಯ ಸರ್ಕಾರ ಮತ್ತು ಡಿಜಿಪಿಗೆ ನೋಟಿಸ್ ಜಾರಿ ಮಾಡಿದೆ.

ಮಣಿಪುರದಲ್ಲಿ ಶಾಂತಿ ಸ್ಥಾಪನೆಗಾಗಿ ನಿಯೋಜಿಸಿರುವ ಭದ್ರತಾ ಪಡೆಗಳು, ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಎನ್‌ಎಚ್‌ಆರ್‌ಸಿ ಹೇಳಿದೆ.
ಈ ವಿಚಾರವನ್ನು ಸ್ವಯಂ ಪ್ರೇರಿತವಾಗಿ ಗಣನೆಗೆ ತೆಗೆದುಕೊಂಡಿರುವ ಎನ್‌ಎಚ್‌ಆರ್‌ಸಿ, 'ಡಿಸೆಂಬರ್ 4ರಂದು 13 ಮಂದಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂಬ ವಿಚಾರವು ಮಾಧ್ಯಮಗಳ ವರದಿಯಿಂದ ತಿಳಿದುಬಂದಿದೆ. ಅದು ನಿಜವಾದರೆ ಅಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯು ಗಂಭೀರ ಸ್ವರೂಪದಲ್ಲಾಗಿದೆ' ಎಂದಿದೆ.
ಎರಡು ವಾರಗಳೊಳಗೆ ವಿಸ್ತೃತ ವರದಿ ಸಲ್ಲಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿಗೆ ಸೂಚಿಸಿದೆ.
ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವಂತೆಯೂ ಕೋರಿದೆ. ಇಂತಹ ಪ್ರಕರಣ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದೂ ಹೇಳಿದೆ.