ಲಖನೌ: 'ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಇದೇ 15ಕ್ಕೆ ಉದ್ಘಾಟನೆಯಾಗುವ ಸಾಧ್ಯತೆ ಇದೆ' ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರದ ವಿಮಾನಯಾನ ಸಚಿವ ಜೋತಿರಾದಿತ್ಯ ಸಿಂದಿಯಾ ಅವರು ಶನಿವಾರ ತಿಳಿಸಿದ್ದಾರೆ.

ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣವನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, 'ಅಯೋಧ್ಯೆಯ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಮುನ್ನವೇ ವಿಮಾನ ನಿಲ್ದಾಣ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ. ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಲಿದ್ದಾರೆ' ಎಂದು ಮಾಹಿತಿ ನೀಡಿದ್ದಾರೆ.
'ವಿಮಾನ ನಿಲ್ದಾಣವು ಅಯೋಧ್ಯೆಯನ್ನು ಇಡೀ ಜಗತ್ತಿನೊಂದಿಗೆ ಸಂಪರ್ಕಿಸುವುದಲ್ಲದೇ, ವಿಶ್ವದ ಪ್ರಮುಖ ಪ್ರಮುಖ ಯಾತ್ರಾ ಸ್ಥಳವನ್ನಾಗಿ ಪರಿವರ್ತಿಸುತ್ತದೆ' ಎಂದು ಯೋಗಿ ಹೇಳಿದ್ದಾರೆ.
'ಅಯೋಧ್ಯೆಯ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ವಿಮಾನ ನಿಲ್ದಾಣ ಪ್ರತಿಬಿಂಬಿಸುತ್ತದೆ. ಎರಡನೇ ಹಂತದ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಬಳಿಕ ಅಧಿಕ ವಿಮಾನಗಳು ನಿಲ್ದಾಣದಲ್ಲಿ ಇಳಿಯಬಹುದು' ಎಂದು ಜೋತಿರಾದಿತ್ಯ ಸಿಂದಿಯಾ ತಿಳಿಸಿದ್ದಾರೆ.