ಮಂಜೇಶ್ವರ: ದಕ್ಷಿಣ ಕನ್ನಡ 2 ಜಿಲ್ಲಾ ವ್ಯಾಪ್ತಿಯ ಮಂಜೇಶ್ವರ ತಾಲೂಕಿನ ಬಂಗ್ರ ಮಂಜೇಶ್ವರದ ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದಲ್ಲಿ 1766 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಹಾಗೂ ಸಮಾರೋಪ ಸಮಾರಂಭ ನಡೆಯಿತು.
ಕುಟುಂಬ ದಿನವನ್ನು ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಉದ್ಘಾಟಿಸಿದರು. 66 ಮಂದಿ ಶಿಬಿರಾರ್ಥಿ ಬಂಧುಗಳು ಹೊಸ ಜೀವನಕ್ಕೆ ಕಾಲಿಟ್ಟರು. ಸಮಾರೋಪ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಶೆಟ್ಟಿ ಕಡಂಬಾರು ಅಧ್ಯಕ್ಷತೆ ವಹಿಸಿದ್ದರು.
ದ.ಕ. ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ, ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಜನಜಾಗೃತಿ ವೇದಿಕೆಯ ಕಾಸರಗೋಡು ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಅಶ್ವಥ್ ಪೂಜಾರಿ ಲಾಲ್ ಭಾಗ್, ಭಜನಾ ಪರಿಷತ್ ಅಧ್ಯಕ್ಷ ದಿನೇಶ್ ಚೆರುಗೊಳಿ, ಮಂಜೇಶ್ವರ ಗ್ರಾಮ ಪಂಚಾಯತಿ ಸದಸ್ಯ ಯಾದವ ಬಡಾಜೆ, ಮಜಿಬೈಲು ಒಕ್ಕೂಟದ ಅಧ್ಯಕ್ಷ ಭಾಸ್ಕರ ಭಂಡಾರಿ ಅತಿಥಿಗಳಾಗಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾಸರಗೋಡು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ನಿಕಟಪೂರ್ವ ಅಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲು, ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಹರಿಶ್ಚಂದ್ರ ಶೆಟ್ಟಿಗಾರ್, ಕೋಶಾಧಿಕಾರಿ ರವಿ ಮುಡಿಮಾರ್, ಜನಜಾಗೃತಿ ವೇದಿಕೆಯ ಸದಸ್ಯ ಹರೀಶ್ ಶೆಟ್ಟಿ ಮಾಡ, ಕಾಸರಗೋಡು ಭಜನಾ ಪರಿಷತ್ತು ಅಧ್ಯಕ್ಷ ವೆಂಕಟ್ರಮಣ ಹೊಳ್ಳ, ಮಂಜೇಶ್ವರ ತಾಲ್ಲೂಕಿನ ಕೇಂದ್ರ ಒಕ್ಕೂಟದ ಅಧ್ಯಕ್ಷ ಉದಯಕುಮಾರ್, ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ, ಶೌರ್ಯ ವಿಪತ್ತು ಘಟಕದ ಯೋಜನಾಧಿಕಾರಿ, ಕಾಸರಗೋಡು, ಮಂಜೇಶ್ವರ ತಾಲ್ಲೂಕಿನ ಯೋಜನಾಧಿಕಾರಿಗಳು, ಶಿಬಿರಾಧಿಕಾರಿ , ಆರೋಗ್ಯ ಸಹಾಯಕಿ, ನವಜೀವನ ಸಮಿತಿ ಸದಸ್ಯರು, ಶೌರ್ಯ ವಿಪತ್ತು ಘಟಕದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಯೋಜನೆಯ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳು, ಸೇವಾಪ್ರತಿನಿಧಿಗಳು, ಸಾರ್ವಜನಿಕ ಬಂಧುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.