ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಇಂದು(ಶನಿವಾರ) ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ 18 ವಿಮಾನಗಳ ಹಾರಾಟದ ಮಾರ್ಗವನ್ನು ಬದಲಿಸಲಾಗಿದೆ.
ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಇಂದು(ಶನಿವಾರ) ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ 18 ವಿಮಾನಗಳ ಹಾರಾಟದ ಮಾರ್ಗವನ್ನು ಬದಲಿಸಲಾಗಿದೆ.
ವಿಮಾನಗಳನ್ನು ಜೈಪುರ್, ಲಖನೌ, ಅಹಮದಾಬಾದ್ ಮತ್ತು ಅಮೃತಸರಕ್ಕೆ ಮಾರ್ಗ ಬದಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಇಂದಿರಾಗಾಂಧಿ ಇಂಟರ್‌ನ್ಯಾಷನಲ್ (ಐಜಿಐ) ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಬೆಳಿಗ್ಗೆ 7 ರಿಂದ 10ರವರೆಗೆ ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ.
ಇಂದು ಬೆಳಗ್ಗೆ ರಾಷ್ಟ್ರ ರಾಜಧಾನಿಯನ್ನು ಮಂಜು ಆವರಿಸಿದ್ದು, ಕನಿಷ್ಠ ತಾಪಮಾನ 12.3 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.
ಗಾಳಿಯ ಗುಣಮಟ್ಟ ಕಳಪೆ:
ಶನಿವಾರ ಬೆಳಿಗ್ಗೆ ದೆಹಲಿಯ ಸರಾಸರಿ ಗಾಳಿಯ ಗುಣಮಟ್ಟ 'ಅತ್ಯಂತ ಕಳಪೆ' ವಿಭಾಗದಲ್ಲಿ ದಾಖಲಾಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ದೆಹಲಿಯ ಆನಂದ ವಿಹಾರ್‌ನಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 388, ಅಶೋಕ ವಿಹಾರದಲ್ಲಿ 386, ಲೋಧಿ ರಸ್ತೆಯಲ್ಲಿ 349 ಹಾಗೂ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 366 ದಾಖಲಾಗಿದೆ.