ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿದ್ದು, ಇಂದು ಒಂದೇ ದಿನ ದೇಶಾದ್ಯಂತ 252 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.
ದೇಶಾದ್ಯಂತ 252 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ವರ್ಷ ಜೂನ್ 2 ರಿಂದೀಚೆಗೆ ಇದು ದಿನವೊಂದರಲ್ಲಿ ದಾಖಲಾದ ಗರಿಷ್ಟ ಪ್ರಮಾಣದ ಸೋಂಕು ಪ್ರಕರಣಗಳಾಗಿದೆ.
ದೇಶದಲ್ಲಿ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 1,091 ಕ್ಕೆ ಏರಿದೆ ಎಂದು ಬುಧವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.
ಅಂತೆಯೇ ದೇಶದ ಒಟ್ಟಾರೆ ಕೋವಿಡ್ ಪ್ರಕರಣಗಳ ಸಂಖ್ಯೆ 4.50 ಕೋಟಿ (4,50,03,593) ದಾಟಿದ್ದು, ಸಾವಿನ ಸಂಖ್ಯೆ 5,33,308 ಕ್ಕೆ ದಾಖಲಾಗಿದೆ ಎಂದು ದತ್ತಾಂಶಗಳಿಂದ ತಿಳಿದುಬಂದಿದೆ.