HEALTH TIPS

ಅಕ್ಟೋಬರ್‌ 2025ರಿಂದ ಟ್ರಕ್‌ ಚಾಲಕರಿಗೆ ಹವಾನಿಯಂತ್ರಿತ ಕ್ಯಾಬಿನ್‌ ಕಡ್ಡಾಯ

              ವದೆಹಲಿ: 2025ರ ಅಕ್ಟೋಬರ್‌ 1ರಿಂದ ಅಥವಾ ನಂತರ ತಯಾರಾಗುವ ಎಲ್ಲಾ ಹೊಸ ಟ್ರಕ್‌ಗಳಲ್ಲಿ ಚಾಲಕರಿಗೆ ಹವಾನಿಯಂತ್ರಿತ ಕ್ಯಾಬಿನ್‌ಗಳನ್ನು ಹೊಂದಿರುವುದು ಕಡ್ಡಾಯ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಅಧಿಸೂಚನೆ ಹೊರಡಿಸಿದೆ.

             ಗೆಜೆಟ್‌ ಅಧಿಸೂಚನೆಯಲ್ಲಿ ಸಚಿವಾಲಯವು '2025 ರ ಅಕ್ಟೋಬರ್‌ 1 ರಿಂದ ಅಥವಾ ನಂತರ ತಯಾರಾಗುವ ವಾಹನಗಳು, ಎನ್‌2 ಮತ್ತು ಎನ್‌3 ವರ್ಗದ ವಾಹನಗಳ ಕ್ಯಾಬಿನ್‌ಗೆ ಹವಾನಿಯಂತ್ರಣ ವ್ಯವಸ್ಥೆಯನ್ನು ಅಳವಡಿಸಬೇಕು.

              ಹವಾನಿಯಂತ್ರಣ ವ್ಯವಸ್ಥೆಯೊಂದಿಗೆ ಅಳವಡಿಸಲಾದ ಕ್ಯಾಬಿನ್‌ನ ಪರೀಕ್ಷೆಯು IS14618:2022 ರ ಪ್ರಕಾರ ಇರಬೇಕು ಎಂದು ತಿಳಿಸಿತ್ತು.

              ಈ ವರ್ಷದ ಜುಲೈನಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಟ್ರಕ್‌ಗಳ ಕ್ಯಾಬಿನ್‌ಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆಯನ್ನು ಕಡ್ಡಾಯಗೊಳಿಸುವ ಕರಡು ಅಧಿಸೂಚನೆಯನ್ನು ಅನುಮೋದಿಸಲಾಗಿದೆ ಎಂದು ಹೇಳಿದ್ದರು.

               ಭಾರತದ ಪ್ರಮುಖ ಕ್ಷೇತ್ರಗಳಲ್ಲಿ ಒಂದಾದ ಸಾರಿಗೆ ಕ್ಷೇತ್ರದಲ್ಲಿ ಟ್ರಕ್‌ ಚಾಲಕರು ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ಅವರ ಕೆಲಸದ ಪರಿಸ್ಥಿತಿಗಳು ಹಾಗೂ ಮನಸ್ಥಿತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಅವಶ್ಯಕತೆಯಿದೆ. ಟ್ರಕ್‌ಗಳಿಗೆ ಹವಾನಿಯಂತ್ರಿತ ಕ್ಯಾಬಿನ್‌ಗಳನ್ನು ಶೀಘ್ರದಲ್ಲೇ ಕಡ್ಡಾಯಗೊಳಿಸಲಾಗುವುದು ಎಂದು ಗಡ್ಕರಿ ಅವರು ಇತ್ತೀಚೆಗೆ ತಿಳಿಸಿದ್ದರು.

                 ಟ್ರಕ್‌ ಚಾಲಕರು ವಿಪರೀತ ಶಾಖದ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಾರೆ ಹಾಗೂ ಹವಾನಿಯಂತ್ರಿತ ಕ್ಯಾಬಿನ್‌ಗಳಿಗಾಗಿ ಬಹಳ ಸಮಯದಿಂದ ಒತ್ತಾಯಿಸುತ್ತಿದ್ದಾರೆ. ಆದರೆ, ಕೆಲವರು ಇದು ವೆಚ್ಚವನ್ನು ಹೆಚ್ಚಿಸುತ್ತದೆ ಎಂದು ವಿರೋಧಿಸಿದರು ಎಂದು ಗಡ್ಕರಿ ಹೇಳಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries