ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲೇ ಹೆಚ್ಚಿನ ಪ್ರಕರಣಗಳು ಕೇರಳದಲ್ಲಿ ವರದಿಯಾಗಿವೆ.
ಶುಕ್ರವಾರ 266 ಮಂದಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,782ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 752 ಮಂದಿಗೆ ಕರೊನಾ ಸೋಂಕು ತಗುಲಿದೆ. ಈ ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇವರಲ್ಲಿ ಇಬ್ಬರು ಕೇರಳದವರು ಮತ್ತು ಇತರರು ರಾಜಸ್ಥಾನ ಮತ್ತು ಕರ್ನಾಟಕದವರು. ಇದರೊಂದಿಗೆ ದೇಶದಲ್ಲಿ ಕರೋನಾಗೆ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 3,420 ಕ್ಕೆ ತಲುಪಿದೆ. ಶುಕ್ರವಾರ 325 ಮಂದಿ ಗುಣಮುಖರಾಗಿದ್ದಾರೆ. ಕೊರೊನಾ ವೈರಸ್‍ನ ಉಪ ರೂಪಾಂತರವಾದ ಜೆಎನ್ 1 ಪತ್ತೆಯಾದ ನಂತರ ಕೇಂದ್ರವು ರಾಜ್ಯಗಳಿಗೆ ಎಚ್ಚರಿಕೆಯನ್ನು ನೀಡಿದೆ.