ನವದೆಹಲಿ: ರಸ್ತೆ ಅಪಘಾತಕ್ಕೆ ತುತ್ತಾಗುವವರಿಗೆ ನಗದು ರಹಿತವಾಗಿ ಚಿಕಿತ್ಸೆ ಒದಗಿಸುವ ಸೌಲಭ್ಯವನ್ನು ಇನ್ನು ಮೂರರಿಂದ ನಾಲ್ಕು ತಿಂಗಳಲ್ಲಿ ದೇಶದಾದ್ಯಂತ ಜಾರಿಗೆ ತರುವ ಆಲೋಚನೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಸ್ತೆ ಸಂಚಾರ ಶಿಕ್ಷಣ ಸಂಸ್ಥೆ (ಐಆರ್‌ಟಿಇ) ಆಯೋಜಿಸಿದ್ದ ಕಾರ್ಯಕ್ರಮವೊಂದರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಕಾರ್ಯದರ್ಶಿ ಅನುರಾಗ್ ಜೈನ್ ಅವರು, 'ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ ಸಾಯುವವರ ಸಂಖ್ಯೆಯು ವಿಶ್ವದಲ್ಲಿಯೇ ಅತಿಹೆಚ್ಚು' ಎಂದು ಹೇಳಿದರು.
'ಅಪಘಾತದಲ್ಲಿ ಗಾಯಗೊಂಡವರಿಗೆ ಉಚಿತವಾಗಿ ಮತ್ತು ನಗದು ರಹಿತವಾಗಿ ಚಿಕಿತ್ಸೆ ಒದಗಿಸುವುದು ತಿದ್ದುಪಡಿ ಆಗಿರುವ ಮೋಟಾರು ವಾಹನ ಕಾಯ್ದೆ 2019ರ ಭಾಗ. ಇದನ್ನು ಕೆಲವು ರಾಜ್ಯಗಳು ಅನುಷ್ಠಾನಕ್ಕೆ ತಂದಿವೆ. ಆದರೆ ಈಗ ರಸ್ತೆ ಸಾರಿಗೆ ಸಚಿವಾಲಯವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜೊತೆ ಸೇರಿ ದೇಶದಾದ್ಯಂತ ಅನುಷ್ಠಾನಕ್ಕೆ ತರುತ್ತಿದೆ' ಎಂದು ಜೈನ್ ತಿಳಿಸಿದರು.