ನವದೆಹಲಿ: ದಟ್ಟವಾದ ಮಂಜಿನಿಂದಾಗಿ ಮಂಗಳವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಮಾರ್ಗವನ್ನು ಬದಲಿಸಲಾಗಿದ್ದು, ಸುಮಾರು 30 ವಿಮಾನಗಳು ವಿಳಂಬಗೊಂಡಿವೆ.
ನವದೆಹಲಿ: ದಟ್ಟವಾದ ಮಂಜಿನಿಂದಾಗಿ ಮಂಗಳವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಮಾರ್ಗವನ್ನು ಬದಲಿಸಲಾಗಿದ್ದು, ಸುಮಾರು 30 ವಿಮಾನಗಳು ವಿಳಂಬಗೊಂಡಿವೆ.
ದೆಹಲಿ ವಿಮಾನ ನಿಲ್ದಾಣದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಇಂದು ಬೆಳಿಗ್ಗೆ ಸುಮಾರು 30 ವಿಮಾನಗಳು ವಿಳಂಬವಾಗಿವೆ.
'ಕಡಿಮೆ ಗೋಚರತೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸುಮಾರು 30 ವಿಮಾನಗಳ ಆಗಮನ ಮತ್ತು ನಿರ್ಗಮನ ಎರಡರಲ್ಲೂ ವಿಳಂಬವಾಗಲಿದೆ. ನವೀಕರಿಸಿದ ಮಾಹಿತಿಗಾಗಿ ಪ್ರಯಾಣಿಕರು ಸಂಬಂಧಿಸಿದ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ವಿನಂತಿಸಲಾಗಿದೆ. ಉಂಟಾದ ಯಾವುದೇ ಅಡಚಣೆಗೆ ತೀವ್ರವಾಗಿ ವಿಷಾದಿಸುತ್ತೇವೆ' ಎಂದು ದೆಹಲಿ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (DIAL) ಸಾಮಾಜಿಕ ಮಾಧ್ಯಮ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.
ಇಂದು ಬೆಳಿಗ್ಗೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ದಟ್ಟವಾದ ಮಂಜು ಕಂಡುಬಂದಿದೆ. ತಾಪಮಾನ ಸುಮಾರು 7 ಡಿಗ್ರಿಗಳಿಗೆ ಇಳಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.