ಹೈದ್ರಾಬಾದ್: ಡಿಸೆಂಬರ್ 4 ಅಥವಾ 9 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭದ್ರತಾ ವ್ಯವಸ್ಥೆ ಮಾಡುವಂತೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ ಕೇಳಿಕೊಂಡಿದ್ದಾರೆ ಎಂದು ತೆಲಂಗಾಣ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ರೆಡ್ಡಿ ಅವರು ಡಿಜಿಪಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಎಡಿಜಿ ಸಿಐಡಿ ಅವರನ್ನು ಕರೆದು ಚರ್ಚಿಸಿದ್ದು, ಪ್ರಮಾಣ ವಚನ ಸಮಾರಂಭದ ಸಿದ್ಧತೆ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ತೆಲಂಗಾಣ ಪೊಲೀಸ್ ಪ್ರಕಟಣೆ ತಿಳಿಸಿದೆ.
ತಮ್ಮ ಪಕ್ಷವು ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಬಗ್ಗೆ ಚರ್ಚಿಸಲಿದೆ ಎಂದು ರೆಡ್ಡಿ ಅವರಿಗೆ ತಿಳಿಸಿದ್ದಾರೆ. 'ಇಂದು ಸಂಜೆಯಿಂದ ಶುಭ ಮುಹೂರ್ತ ಆರಂಭವಾಗಲಿದೆ ಎಂದು ಪಿಟಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ಹಾಗಾಗೀ, ಸಾಧ್ಯವಾದರೆ ನಾಳೆ ಅಥವಾ ಡಿಸೆಂಬರ್ 9ರಂದು ಪ್ರಮಾಣ ವಚನ ಸ್ವೀಕರಿಸಬಹುದು ಎಂದು ಅದು ಹೇಳಿದೆ.
ಎಲ್ ಬಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು,ಇದರಲ್ಲಿ ದೆಹಲಿಯ ಹಿರಿಯ ನಾಯಕರಲ್ಲದೆ ಹಲವು ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ರೆಡ್ಡಿ ಡಿಜಿಪಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.