HEALTH TIPS

ಡಿಸೆಂಬರ್ 4 ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ, ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣ ಸಿದ್ಧ: ಪ್ರಹ್ಲಾದ್ ಜೋಶಿ

             ನವದೆಹಲಿ: ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ. ಸಂಸತ್ತಿನ ಚಳಿಗಾಲ ಅಧಿವೇಶನ ಸುಗಮವಾಗಿ ನಡೆಯಲು ಪ್ರತಿಪಕ್ಷಗಳಿಗೆ ಮನವಿ ಮಾಡಿದ್ದೇವೆ ಎಂದು ದೆಹಲಿಯಲ್ಲಿ ಶನಿವಾರ ಸರ್ವಪಕ್ಷ ಸಭೆ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

           ಡಿಸೆಂಬರ್ 4 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, 15 ಅಧಿವೇಶನಗಳು ನಡೆಯಲಿವೆ. ಇಂದು ಸರ್ವಪಕ್ಷ ಸಭೆ ಕರೆದಿದ್ದೆವು. 23 ಪಕ್ಷಗಳ 30 ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ಈ ಬಾರಿ ಕೂಡ ಸದನದಲ್ಲಿ ಶೂನ್ಯ ವೇಳೆ ನಿಯಮಿತವಾಗಿ ನಡೆಯುತ್ತದೆ ಎಂದರು.


    ಸದನದ ಕಲಾಪದಲ್ಲಿ ರಚನಾತ್ಮಕ ಚರ್ಚೆಗಳಿಗೆ ವಾತಾವರಣವನ್ನು ಕಾಪಾಡಿಕೊಳ್ಳಬೇಕು ಎಂದು ನಾವು ಎಲ್ಲರನ್ನೂ ವಿನಂತಿಸಿಕೊಂಡಿದ್ದೇವೆ, ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸಿ ಚರ್ಚೆಗಳು ನಡೆಯಬೇಕು. ಸರ್ಕಾರವು ಎಲ್ಲಾ ರಚನಾತ್ಮಕ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಸಂಪೂರ್ಣ ಸಿದ್ಧವಾಗಿದೆ ಎಂದು ಮನವರಿಕೆ ಮಾಡಿದ್ದೇವೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಚಿವರು ಹೇಳಿದರು. 

             ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಇಂದು ಪಾರ್ಲಿಮೆಂಟ್ ಲೈಬ್ರರಿ ಕಟ್ಟಡದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನು ಜೋಶಿ ವಹಿಸಿದ್ದರು. ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬಹುದಾದ ಮಸೂದೆಗಳ ಪಟ್ಟಿಯಲ್ಲಿ ಭಾರತೀಯ ನ್ಯಾಯ ಸಂಹಿತಾ ಮಸೂದೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮಸೂದೆ 2023 ಮತ್ತು ಭಾರತೀಯ ಸಾಕ್ಷಿ ಮಸೂದೆ 2023 ಸೇರಿವೆ.

              17ನೇ ಲೋಕಸಭೆಯ 14ನೇ ಅಧಿವೇಶನ ಮತ್ತು ರಾಜ್ಯಸಭೆಯ 262ನೇ ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬಹುದಾದ ಮಸೂದೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

    ಕಾಮೆಂಟ್‌‌ ಪೋಸ್ಟ್‌ ಮಾಡಿ

    0 ಕಾಮೆಂಟ್‌ಗಳು
    * Please Don't Spam Here. All the Comments are Reviewed by Admin.

    Top Post Ad

    Click to join Samarasasudhi Official Whatsapp Group

    Qries

    Qries

    Below Post Ad


    ಜಾಹಿರಾತು














    Qries