ಮುಂಬೈ: ಐಎಸ್ ಉಗ್ರ ಸಂಘಟನೆಯ ಪರವಾಗಿ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಉತ್ತೇಜನ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಆರು ಮಂದಿಯ ವಿರುದ್ಧ ಗುರುವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಮುಂಬೈ: ಐಎಸ್ ಉಗ್ರ ಸಂಘಟನೆಯ ಪರವಾಗಿ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಉತ್ತೇಜನ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಆರು ಮಂದಿಯ ವಿರುದ್ಧ ಗುರುವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.
ತಬಿಶ್ ಸಿದ್ದೀಖಿ, ಜುಲ್ಫಿಕರ್ ಅಲಿ, ಶಾರ್ಜಿಲ್ ಶೇಖ್, ಅಕಿಫ್ ಅತೀಖ್ ನಚಾನ್, ಜುಬೈರ್ ಶೇಖ್ ಮತ್ತು ಅದ್ನಾನಲಿ ಸರ್ಕಾರ್ ಎಂಬವರ ವಿರುದ್ಧ ನಾಲ್ಕು ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ದೇಶದ ಭದ್ರತೆಗೆ ಧಕ್ಕೆ ಉಂಟುಮಾಡಲು ಮತ್ತು ಕೋಮು ಸಾಮರಸ್ಯ ಕದಡಲು ಆರೋಪಿಗಳು ಯತ್ನಿಸಿದ್ದಾರೆ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಹಣ ಸಂಗ್ರಹ ಮಾಡಿದ್ದಾರೆ ಎಂದು ಎನ್‌ಐಎ ಆರೋಪಿಸಿದೆ.
ಆರೋಪಿಗಳು ಐಎಸ್ ಸಂಘಟನೆಯ ಜೊತೆಗೆ ನಂಟು ಹೊಂದಿದ್ದಾರೆ ಎಂಬುದು ಅವರಿಂದ ವಶಪಡಿಸಿಕೊಂಡಿರುವ ವಸ್ತುಗಳಿಂದ ದೃಢಪಟ್ಟಿದೆ ಎಂದು ಹೇಳಿದೆ. ಕಳೆದ ಜೂನ್ 28ರಂದು ಎನ್‌ಐಎ ಪ್ರಕರಣ ದಾಖಲಿಸಿಕೊಂಡಿತ್ತು.